ನವದೆಹಲಿ : ಮಧ್ಯಪ್ರದೇಶದ ವೃತ್ತಿಪರ ಪರೀಕ್ಷಾ ಮಂಡಳಿ ನೇಮಕತಿ ಹಗರಣದಲ್ಲಿ ಶಾಮೀಲಾದ ಆರೋಪ ಹಿನ್ನಲೆಯಲ್ಲಿ ರಾಜ್ಯಪಾಲ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಕೇಂದ್ರ ಗೃಹಸಚಿವಾಲಯ ರಾಮ್ ನರೇಶ್ ಯಾದವ್ ಗೆ ಸೂಚನೆ ನೀಡಿದೆ.
ವೃತ್ತಿಪರ ಶಿಕ್ಷಣ ಮಂಡಳಿಯಲ್ಲಿನ ನೇಮಕಾತಿ ಹಗರಣ ನಡೆದಿದ್ದು, ಮಧ್ಯಪ್ರದೇಶ ಸ್ಪೆಷಲ್ ಟಾಸ್ಕ್ ಪೋರ್ಸ್ ಪ್ರಕರಣದ ತನಿಖೆ ನಡೆಸುತ್ತಿದೆ.ಹಗರಣದಲ್ಲಿ ಶಾಮೀಲಾದ ಆರೋಪ ಹಿನ್ನಲೆಯಲ್ಲಿ ಭ್ರಷ್ಟಾಚಾರ ತಡೆ ಕಾಯ್ದೆಯಡಿ ರಾಮ್ ನರೇಶ್ ಯಾದವ್ ವಿರುದ್ಧ ಎಫ್.ಐ.ಆರ್ ದಾಖಲಿಸಲಾಗಿತ್ತು.
ದೇಶದಲ್ಲಿ ಇದೇ ಮೊದಲ ಬಾರಿಗೆ ಹಾಲಿ ರಾಜ್ಯಪಾಲರ ವಿರುದ್ಧ ಎಫ್.ಐ.ಆರ್ ದಾಖಲಾದ ಪ್ರಕರಣವಾಗಿದೆ. ಹಗರಣದ ವಿವರಣೆ ನೀಡುವಂತೆ ರಾಜ್ಯಪಾಲರನ್ನು ಕೇಂದ್ರ ಗೃಹ ಸಚಿವಾಲಯ ಕೇಳಿತ್ತು.
ಆದರೆ ಇತ್ತೀಚಿನ ಮಾಹಿತಿ ಪ್ರಕಾರ ಭ್ರಷ್ಟಾಚಾರ ಆರೋಪ ಹಿನ್ನಲೆಯಲ್ಲಿ ರಾಜ್ಯಪಾಲ ಹುದ್ದೆಗೆ ರಾಜೀನಾಮೆ ನೀಡುವಂತೆ ಕೇಂದ್ರ ಗಿಹ ಸಚಿವಾಲಯ ಯಾದವ್ ಗೆ ಸೂಚನೆ ನೀಡಿದೆ ಎಂದು ತಿಳಿದುಬಂದಿದೆ.