Untitled Document
Sign Up | Login    
Dynamic website and Portals
  
February 25, 2015

ಎಪ್ರಿಲ್ ನಲ್ಲಿ ರಾಹುಲ್ ಗೆ ಎಐಸಿಸಿ ಅಧ್ಯಕ್ಷ ಪಟ್ಟ ಬಹುತೇಕ ಖಚಿತ

ತಾಯಿ ಸೋನಿಯಾ ಗಾಂಧಿ ಜೊತೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ  (ಸಂಗ್ರಹ ಚಿತ್ರ) ತಾಯಿ ಸೋನಿಯಾ ಗಾಂಧಿ ಜೊತೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ (ಸಂಗ್ರಹ ಚಿತ್ರ)

ನವದೆಹಲಿ : ರಜೆಯಲ್ಲಿರುವ 'ರಾಹುಲ್ ಗಾಂಧಿ' ಅವರನ್ನು ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಮಾಡುವುದಕ್ಕೆ ಎಲ್ಲಾ ರೀತಿಯ ಸಿದ್ಧತೆ ನಡೆದಿದೆ. ಏಪ್ರಿಲ್ ನಲ್ಲಿ ನಡೆಯಲಿರುವ ಎಐಸಿಸಿ ಅಧಿವೇಶನದಲ್ಲಿ ಈ ಬಗ್ಗೆ ಅಧಿಕೃತವಾಗಿ ಘೋಷಿಸಲಾಗುತ್ತದೆ.

ರಾಹುಲ್ ಗಾಂಧಿ ಬದಲು ಪ್ರಿಯಾಂಕ ವಾಧ್ರ ಅವರಿಗೆ ಪಕ್ಷದ ಸಾರಥ್ಯ ವಹಿಸಬೇಕೆಂಬ ಬೇಡಿಕೆ ಇದ್ದರೂ ರಾಹುಲ್ ಗಾಂಧಿ ಅವರನ್ನೇ ಎಐಸಿಸಿಯ ಅಧ್ಯಕ್ಷರನ್ನಾಗಿ ಮಾಡುವ ಸಾಧ್ಯತೆ ದಟ್ಟವಾಗಿದೆ. ಪಕ್ಷದ ಉನ್ನತ ಅಧಿಕಾರವನ್ನು ವಹಿಸಿಕೊಳ್ಳುವುದರ ಬಗ್ಗೆ ಈಗಾಗಲೇ ರಾಹುಲ್ ಗಾಂಧಿ ಸಹ ಹಿರಿಯ ನಾಯಕರೊಂದಿಗೆ ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗಿದೆ.

ರಾಹುಲ್ ಗಾಂಧಿ ಸಂಸತ್ ಅಧಿವೇಶನಕ್ಕೂ ಗೈರು ಹಾಜರಾಗಿ ದೀರ್ಘಾವಧಿ ರಜೆ ತೆಗೆದುಕೊಂಡಿರುವುದರಿಂದ, 130 ವರ್ಷಗಳಷ್ಟು ಹಳೆಯ ಇತಿಹಾಸವುಳ್ಳ ಪಕ್ಷದ ಉಪಾಧ್ಯಕ್ಷರು ರಾಜಕೀಯದಿಂದ ನಿವೃತ್ತಿಪಡೆಯಲಿದ್ದಾರೆಯೆ ಎಂಬ ಬಗ್ಗೆ ಅನುಮಾನ ಮೂಡಿತ್ತು. ಆದರೆ ರಾಹುಲ್ ಗಾಂಧಿ ರಾಜಕೀಯದಿಂದ ನಿವೃತ್ತಿ ಪಡೆಯುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಕಾಂಗ್ರೆಸ್ ಮುಖಂಡರು, ರಾಹುಲ್ ಗಾಂಧಿ ಅವರು ಅಧ್ಯಕ್ಷ ಸ್ಥಾನ ನೀಡುವುದಕ್ಕೆ ತಯಾರಿ ನಡೆಸುತ್ತಿದ್ದಾರೆ.

ಮಾರ್ಚ್ 10ರಂದು ರಾಹುಲ್ ಗಾಂಧಿ ಭಾರತಕ್ಕೆ ವಾಪಸ್ಸಾಗಲಿದ್ದು, ಏಪ್ರಿಲ್ ನಲ್ಲಿ ನಡೆಯಲಿರುವ ಎಐಸಿಸಿ ಅಧಿವೇಶನದಲ್ಲಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದಾರೆಯೇ ಎಂಬ ಬಗ್ಗೆ ಕುತೂಹಲ ಮೂಡಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited