ಬೆಂಗಳೂರು : ಸುಗ್ರೀವಾಜ್ಞೆ ಮೂಲಕ ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ಭೂಸ್ವಾಧೀನ ಕಾಯ್ದೆ ವಿರುದ್ಧ ಮಾ.2ರಿಂದ ಹೋರಾಟ ನಡೆಸಲಾಗುವುದು ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರೀಮಂತರು ಮತ್ತು ಕಾರ್ಪೋರೇಟ್ ಸಂಸ್ಥೆಗಳ ಪರವಾಗಿ ಕೆಲಸ ಮಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಆ ವರ್ಗಕ್ಕೆ ಅನುಕೂಲವಾ ಗಲೆಂದು ರೈತ ವಿರೋಧಿ ನೀತಿ ಜಾರಿಗೆ ಮುಂದಾಗಿದ್ದಾರೆ. ಕೇಂದ್ರ ಸರ್ಕಾರದ ಈ ನಡೆ ವಿರುದ್ಧ ರಾಜ್ಯಾದ್ಯಂತ ಹೋರಾಟ ನಡೆಸಿ ಜನಜಾಗೃತಿ ಮೂಡಿಸಲಾಗುವುದು ಎಂದು ಹೇಳಿದರು.
ಹುಬ್ಬಳ್ಳಿಯ ಕರ್ನಾಟಕ ವೈದ್ಯ ವಿಜ್ಞಾನ ಸಂಸ್ಥೆ (ಕಿಮ್ಸ್) ನಿರ್ದೇಶಕ ಡಾ. ದತ್ತಾತ್ರೇಯ ಡಿ. ಬಂಟ್ ಅವರನ್ನು ಹುದ್ದೆಯಿಂದ ವಜಾಗೊಳಿಸಿ ಸಂಸ್ಥೆಯಲ್ಲಿ ನಡೆದ ಭ್ರಷ್ಟಾಚಾರಗಳ ಬಗ್ಗೆ ನ್ಯಾಯ ಸಮ್ಮತ ತನಿಖೆ ನಡೆಸಬೇಕು ಎಂದು ಇದೇ ವೇಳೆ ಆಗ್ರಹಿಸಿದರು.