Untitled Document
Sign Up | Login    
Dynamic website and Portals
  
February 28, 2015

ಬಜೆಟ್ ಮಂಡನೆ ಹಿನ್ನೆಲೆ: ನಿಫ್ಟಿ, ಸೆನ್ಸೆಕ್ಸ್ ಸೂಚ್ಯಂಕ ಏರಿಕೆ

ಮುಂಬೈ : 'ಎನ್.ಡಿ.ಎ' ಸರ್ಕಾರದ ಪೂರ್ಣ ಪ್ರಮಾಣದ ಬಜೆಟ್ ಮಂಡನೆಯಾಗಲಿರುವ ಹಿನ್ನೆಲೆಯಲ್ಲಿ ಷೇರುಪೇಟೆಯಲ್ಲೂ ನಿರೀಕ್ಷೆಗಳು ಗರಿಗೆದರಿದ್ದು, ಸೆನ್ಸೆಕ್ಸ್ ಹಾಗೂ ನಿಫ್ಟಿ ಅಂಶಗಳು ಏರಿಕೆ ಕಂಡಿವೆ.

ಫೆ.28ರ ಬೆಳಿಗ್ಗೆ ಆರಂಭವಾದ ವಹಿವಾಟಿನಲ್ಲಿ ಸೆನ್ಸೆಕ್ಸ್ ಸೂಚ್ಯಂಕ 250 ಅಂಶಗಳಷ್ಟು ಏರಿಕೆಯಾದರೆ, ನಿಫ್ಟಿ ಸೂಚ್ಯಂಕ 70 ಅಂಶಗಳಷ್ಟು ಏರಿಕೆಯಾಗಿದೆ. ಅರುಣ್ ಜೇಟ್ಲಿ ಮಂಡಿಸಲಿರುವ 2015-16ನೇ ಸಾಲಿನ ಬಜೆಟ್ ಬಗ್ಗೆ ತೀವ್ರ ಕುತೂಹಲ ಮೂಡಿದ್ದು, ಹೂಡಿಕೆದಾರರು ತಮ್ಮ ಕ್ಷೇತ್ರಕ್ಕೆ ವಿತ್ತ ಸಚಿವರು ಯಾವ ಕೊಡುಗೆ ನೀಡಲಿದ್ದಾರೆ ಎಂಬುದನ್ನು ನಿರೀಕ್ಷಿಸುತ್ತಿದ್ದಾರೆ.

ಹೂಡಿಕೆ ಹಾಗೂ ಉತ್ಪಾದನಾ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡುವ ನಿರೀಕ್ಷೆ ಇರುವ ಹಿನ್ನೆಲೆಯಲ್ಲಿ ಮುಂಬೈ ಷೇರು ಮಾರುಕಟ್ಟೆಯಲ್ಲಿ ಸೆನ್ಸೆಕ್ಸ್ ಹಾಗೂ ನಿಫ್ಟಿ ಸೂಚ್ಯಂಕ ಏರಿಕೆ ಕಂಡಿದೆ. ಬೆಳಿಗ್ಗೆ 11 ಗಂಟೆಗೆ ಪ್ರಾರಂಭವಾಗುವ ಸಂಸತ್ ಅಧಿವೇಶನದಲ್ಲಿ ಅರುಣ್ ಜೇಟ್ಲಿ ಬಜೆಟ್ ಮಂಡನೆ ಮಾಡಲಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Business & Economics

ಎಸ್‌.ಎಂ.ಕೃಷ್ಣ ಅಳಿಯ ಸಿದ್ಧಾರ್ಥ ಮಾಲಿಕತ್ವದ ಕೆಫೆ ಕಾಫಿ ಡೇ ಮೇಲೆ ಐಟಿ ದಾಳಿ
  • ಎಸ್‌.ಎಂ.ಕೃಷ್ಣ ಅಳಿಯ ಸಿದ್ಧಾರ್ಥ ಮಾಲಿಕತ್ವದ ಕೆಫೆ ಕಾಫಿ ಡೇ ಮೇಲೆ ಐಟಿ ದಾಳಿ
  • ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅಳಿಯ ಸಿದ್ಧಾರ್ಥ ಮಾಲಿಕತ್ವದ ಕೆಫೆ ಕಾಫಿ ಡೇ ಮೇಲೆ ಬೆಳ್ಳಂಬೆಳಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
  • ಆರ್ ಬಿಐ ನೂತನ ಅಧ್ಯಕ್ಷರಿಂದ ಮೊದಲ ಹಣಕಾಸು ನೀತಿ ಪ್ರಕಟ
  • ಸಾಮಾನ್ಯ ಬಜೆಟ್ ನೊಂದಿಗೆ ರೈಲ್ವೆ ಬಜೆಟ್ ವಿಲೀನ
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited