Untitled Document
Sign Up | Login    
Dynamic website and Portals
  
February 28, 2015

2011-12 ನೇ ಸಾಲಿನಲ್ಲಿ ಸಶಸ್ತ್ರ ಪಡೆ 28 ವಿಮಾನ 14 ಹೆಲಿಕಾಪ್ಟರ್ ಪತನ

ನವದೆಹಲಿ : 2011-12 ನೇ ಸಾಲಿನಲ್ಲಿ ಉಂಟಾದ ಅಪಘಾತದಲ್ಲಿ ಭಾರತೀಯ ಸಶಸ್ತ್ರ ಪಡೆಗಳು 28 ವಿಮಾನ 14 ಹೆಲಿಕಾಪ್ಟರ್ ಗಳನ್ನು ಕಳೆದುಕೊಂಡಿದೆ. ಈ ಅಪಘಾತಗಳಲ್ಲಿ 42ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ.

ಅಪಘಾತಕ್ಕೀಡಾಗಿರುವ 28 ವಿಮಾನಗಳ ಪೈಕಿ 14 ಮಿಗ್ ಫೈಟರ್ ಗಳಾಗಿದ್ದು, ಹಲವು ವರ್ಷಗಳ ಹಿಂದೆಯೇ ನಿವೃತ್ತಿಯಾಗಬೇಕಿತ್ತು ಎಂದು ತಿಳಿದುಬಂದಿದೆ. ಈ ಅಪಘಾತಗಳಲ್ಲಿ ವಿಮಾನ ಹಾಗೂ ಹೆಲಿಕಾಫ್ಟರ್ ಗಳು ಪತನವಾಗಿರುವುದರಿಂದ ಸರ್ಕಾರಕ್ಕೆ ಸುಮಾರು 1,127.37 ಕೋಟಿ ರುಪಾಯಿ ನಷ್ಟ ಉಂಟಾಗಿದೆ ಎಂದು ರಕ್ಷಣಾ ಸಚಿವ ಮನೋಹರ್ ಪರೀಕ್ಕರ್ ಹೇಳಿದ್ದಾರೆ.

ಸಶಸ್ತ್ರಪಡೆಗೆ ಸೇರಿದ ವಿಮಾನಗಳು ಪತನಗೊಳ್ಳುವುದಕ್ಕೆ ತಾಂತ್ರಿಕ ಸಮಸ್ಯೆಯೇ ಪ್ರಮುಖ ಕಾರಣ ಎಂದು ತಿಳಿದುಬಂದಿದೆ. ಪ್ರಮುಖ ಹೆಲಿಕಾಫ್ಟರ್ ಗಳನ್ನು ಖರೀದಿಸಲಾಗುವುದು ಎಂದು ಮನೋಹರ್ ಪರೀಕ್ಕರ್ ತಿಳಿಸಿದ್ದಾರೆ.

ರಾಷ್ಟ್ರೀಯ ಭದ್ರತೆಗೆ ಅನುಗುಣವಾಗಿ ಹೊಸ ತಂತ್ರಜ್ನಾನವಿರುವ ಹೆಲಿಕಾಫ್ಟರ್ ಗಳನ್ನು ಖರೀದಿಸಲಾಗುತ್ತದೆ. ಹಾಗೂ ಇದರ ಅಗತ್ಯತೆಗಳ ಬಗ್ಗೆ ಸರ್ಕಾರ ನಿರಂತರವಾಗಿ ಗಮನ ಹರಿಸುತ್ತಿದೆ ಎಂದು ರಕ್ಷಣಾ ಸಚಿವರು ಹೇಳಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : General

ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
  • ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
  • ದೇಶಿ ನಿರ್ಮಿತ ಮೂರನೇ ಜಲಾಂತರ್ಗಾಮಿ ನೌಕೆ ಪ್ರಾಜೆಕ್ಟ್‌ 28ರ ಅಡಿಯಲ್ಲಿ ನಿರ್ಮಾಣಗೊಂಡ ಐಎನ್‌ಎಸ್‌ ಕಿಲ್ತಾನ್‌ ನೌಕೆಯನ್ನು ವಿಶಾಖಪಟ್ಟಣದ ನೌಕಾ ನೆಲೆಯಲ್ಲಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಲೋಕಾರ್ಪಣೆ ಮಾಡಿದರು.
  • ಆರುಷಿ ಹತ್ಯೆ ಪ್ರಕರಣ: ತಲ್ವಾರ್ ದಂಪತಿಗಳು ಖುಲಾಸೆ;ಅಲಹಾಬಾದ್ ಹೈಕೋರ್ಟ್ ತೀರ್ಪು
  • ಅ.12ರ ಮಧ್ಯ ರಾತ್ರಿಯಿಂದ ಪೆಟ್ರೋಲ್ ಬಂಕ್ ಬಂದ್
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited