Untitled Document
Sign Up | Login    
Dynamic website and Portals
  
March 2, 2015

ಜಮ್ಮು-ಕಾಶ್ಮೀರ ಸಿ.ಎಂ ವಿವಾದಾತ್ಮಕ ಹೇಳಿಕೆ ವಿರುದ್ಧ ಲೋಕಸಭೆಯಲ್ಲಿ ಆಕ್ರೋಶ

ಉಗ್ರರನ್ನು ಹೊಗಳಿದ್ದ ಮುಫ್ತಿ ಮೊಹಮದ್ ಸಯೀದ್ ಹೇಳಿಕೆಗೆ ಸಹಮತ ಇಲ್ಲ- ರಾಜನಾಥ್ ಸಿಂಗ್

ಮಲ್ಲಿಕಾರ್ಜುನ ಖರ್ಗೆ ಮಲ್ಲಿಕಾರ್ಜುನ ಖರ್ಗೆ

ನವದೆಹಲಿ : ಸರ್ಕಾರ ರಚನೆಯಾದ ದಿನದಂದೇ ಉಗ್ರರನ್ನು ಹೊಗಳಿ ಹೇಳಿಕೆ ನೀಡಿದ್ದ ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಮುಫ್ತಿ ಮೊಹಮದ್ ಸಯೀದ್ ಹೇಳಿಕೆಗೆ ಲೋಕಸಭೆಯಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಕಾಂಗ್ರೆಸ್ ಸದಸ್ಯರು ಸಭಾತ್ಯಾಗ ಮಾಡಿದ್ದಾರೆ.

ಲೋಕಸಭೆ ಕಲಾಪ ಆರಂಭವಾಗುತ್ತಿದ್ದಂತೆಯೇ ಮುಫ್ತಿ ಮೊಹಮ್ಮದ್ ಸಯೀದ್ ಹೇಳಿಕೆಯ ಬಗ್ಗೆ ವಿಷಯ ಪ್ರಸ್ತಾಪಿಸಿದ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಬಿಜೆಪಿ ಹಾಗೂ ಪಿಡಿಪಿ ಜಮ್ಮು-ಕಾಶ್ಮೀರದಲ್ಲಿ ಸರ್ಕಾರ ರಚನೆ ಮಾಡಿವೆ. ಸರ್ಕಾರ ರಚನೆಯಾದ ದಿನದಂದೇ ಬಿಜೆಪಿ ಮೈತ್ರಿಕೂಟದ ಪಿಡಿಪಿ, ಪಾಕಿಸ್ತಾನದ ಉಗ್ರರನ್ನು ಹೊಗಳಿ ಹೇಳಿಕೆ ನೀಡಿದೆ ಈ ಬಗ್ಗೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಬೇಕೆಂದು ಒತ್ತಾಯಿಸಿದರು.

ಖರ್ಗೆ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಜಮ್ಮು ಕಾಶ್ಮೀರದ ಮುಖ್ಯಮಂತ್ರಿ ಮುಫ್ತಿ ಅವರ ವಿವಾದಾತ್ಮಕ ಹೇಳಿಕೆಗೆ ತಮ್ಮ ಸಹಮತ ಇಲ್ಲ ಎಂದಿದ್ದಾರೆ. ಗೃಹ ಸಚಿವರ ಸ್ಪಷ್ಟನೆಯಿಂದ ಸಮಾಧಾನಗೊಳ್ಳದ ಕಾಂಗ್ರೆಸ್ ಸದಸ್ಯರು ಈ ಬಗ್ಗೆ ಪ್ರಧನಿ ನರೇಂದ್ರ ಮೋದಿ ಸ್ಪಷ್ಟನೆ ನೀಡಲಿ ಎಂದು ಪಟ್ಟು ಹಿಡಿದರು. ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟನೆ ನೀಡದೇ ಇದ್ದ ಕಾರಣ ಆಕ್ರೋಶಗೊಂಡ ಕಾಂಗ್ರೆಸ್ ಸದಸ್ಯರು ಸಭಾತ್ಯಾಗ ಮಾಡಿದ್ದಾರೆ.

2014ರ ನವೆಂಬರ್-ಡಿಸೆಂಬರ್ ತಿಂಗಳಲ್ಲಿ ಕಣಿವೆ ರಾಜ್ಯದಲ್ಲಿ ಐದು ಹಂತಗಳಲ್ಲಿ ಚುನಾವಣೆ ಶಾಂತಿಯುತವಾಗಿ ಮತ್ತು ಯಶಸ್ವಿಯಾಗಿ ನಡೆಯಲು ಪಾಕಿಸ್ತಾನ, ಹುರಿಯತ್ ಕಾನ್ಫರೆನ್ಸ್ ಹಾಗೂ ಉಗ್ರಗಾಮಿ ಸಂಘಟನೆಗಳ ಅನುಕೂಲಕರ ವಾತಾವರಣವೇ ಕಾರಣ ಎಂದು ನೂತನ ಸಿಎಂ ಮುಫ್ತಿ ಮೊಹಮ್ಮದ್ ಸಯೀದ್ ಪ್ರಮಾಣವಚನ ಸ್ವೀಕರಿಸಿದ ನಂತರದ ಮೊದಲ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದರು. ಈ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited