Untitled Document
Sign Up | Login    
Dynamic website and Portals
  
March 4, 2015

ಆಮ್ ಆದ್ಮಿ ಪಕ್ಷದ ಸಂಚಾಲಕ ಹುದ್ದೆಗೆ ಕೇಜ್ರಿವಾಲ್ ರಾಜೀನಾಮೆ

ಪಕ್ಷಕ್ಕಿಂತ ದೆಹಲಿ ಸರ್ಕಾರವೇ ಮುಖ್ಯ-ಕೇಜ್ರಿವಾಲ್

ಅರವಿಂದ್ ಕೇಜ್ರಿವಾಲ್ ಅರವಿಂದ್ ಕೇಜ್ರಿವಾಲ್

ನವದೆಹಲಿ : 'ಆಮ್ ಆದ್ಮಿ ಪಕ್ಷ'ದಲ್ಲಿ ಭಿನ್ನಮತ ತೀವ್ರ ಸ್ವರೂಪ ಪಡೆದುಕೊಂಡಿದ್ದರ ಹಿನ್ನೆಲೆಯಲ್ಲಿ, ಆಮ್ ಆದ್ಮಿ ಪಕ್ಷರಾಷ್ಟ್ರೀಯ ಸಂಚಾಲಕ ಸ್ಥಾನಕ್ಕೆ ಅರವಿಂದ್ ಕೇಜ್ರಿವಾಲ್ ರಾಜೀನಾಮೆ ನೀಡಿದ್ದಾರೆ.

ಸಂಚಾಲಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಅರವಿಂದ್ ಕೇಜ್ರಿವಾಲ್, ತಾವು, ದೆಹಲಿ ಸರ್ಕಾರದ ಬಗ್ಗೆ ಮಾತ್ರ ಗಮನ ಹರಿಸುವುದಾಗಿ ತಿಳಿಸಿದ್ದಾರೆ. ಪಕ್ಷದಲ್ಲಿ ಭಿನ್ನಾಭಿಪ್ರಾಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಾ.4ರಂದು ಆಪ್ ನ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯಬೇಕಿತ್ತು. ಈ ಸಭೆಯಲ್ಲಿ ಯೋಗೇಂದ್ರ ಯಾದವ್ ಹಾಗೂ ಪ್ರಶಾಂತ್ ಭೂಷಣ್ ಅವರ ಭವಿಷ್ಯ ನಿರ್ಧಾರವಾಗಬೇಕಿತ್ತು. ಇದಕ್ಕೂ ಮುನ್ನ ಅರವಿಂದ್ ಕೇಜ್ರಿವಾಲ್ ತಮ್ಮ ಸಂಚಾಲಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಪಕ್ಷದಲ್ಲಿ ಉಂಟಾಗಿರುವ ಗೊಂದಲವನ್ನು ಪಕ್ಷದ ಸಭೆಯಲ್ಲಿ ಸಂಪೂರ್ಣವಾಗಿ ಪರಿಹರಿಸಿಕೊಳ್ಳುವುದಾಗಿ ಕುಮಾರ್ ವಿಶ್ವಾಸ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಆಮ್ ಆದ್ಮಿ ಪಕ್ಷದ ಆಂತರಿಕ ಕಲಹ ಹಾಗೂ ಅರವಿಂದ್ ಕೇಜ್ರಿವಾಲ್ ರಾಜೀನಾಮೆ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ನಾಯಕ ವಿಜಯ್ ಗೋಯೆಲ್, ದೆಹಲಿ ಆಡಳಿತದ ಮೇಲೆ ಆಪ್ ನ ಆಂತರಿಕ ಭಿನ್ನಮತ ಪರಿಣಾಮ ಬೀರದಂತೆ ಆಮ್ ಆದ್ಮಿ ಪಕ್ಷ ಎಚ್ಚರ ವಹಿಸಬೇಕು ಎಂದು ಸಲಹೆ ನೀಡಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited