Untitled Document
Sign Up | Login    
Dynamic website and Portals
  
March 5, 2015

ಮುಸ್ಲಿಂ ಸಮುದಾಯಕ್ಕೆ ಮೀಸಲಾತಿ ರದ್ದು: ಮಹಾ ಸರ್ಕಾರದ ವಿರುದ್ಧ ಕಾಂಗ್ರೆಸ್ ಆಕ್ರೋಶ

ಮುಂಬೈ : 'ಮಹಾರಾಷ್ಟ್ರ'ದಲ್ಲಿ ಮುಸ್ಲಿಂ ಸಮುದಾಯಕ್ಕೆ ಮೀಸಲಾತಿ ರದ್ದುಗೊಳಿಸಿರುವುದಕ್ಕೆ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ಸರ್ಕಾರಿ ಹುದ್ದೆಗಳಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಲಾಗುತಿದ್ದ ಶೇ.5ರಷ್ಟು ಮೀಸಲಾತಿಯನ್ನು ರದ್ದುಗೊಳಿಸಿರುವುದು ಸರಿಯಲ್ಲ ಎಂದು ಕಾಂಗ್ರೆಸ್ ಅಸಮಾಧಾನ ವ್ಯಕ್ತಪಡಿಸಿದೆ. ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ನೇತೃತ್ವದ ಸರ್ಕಾರ ಮುಸ್ಲಿಮ್ ಮೀಸಲಾತಿ ರದ್ದುಗೊಳಿಸಿರುವುದರ ಬಗ್ಗೆ ಬಜೆಟ್ ಅಧಿವೇಶನದಲ್ಲಿ ಪ್ರಸ್ತಾಪಿಸಿ, ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುವುದಾಗಿ ಕಾಂಗ್ರೆಸ್ ಎಚ್ಚರಿಸಿದೆ.

ಮಹಾರಾಷ್ಟ್ರದಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಲಾಗಿದ್ದ ಮೀಸಲಾತಿಯನ್ನು ಸರ್ಕಾರ ಹಿಂಪಡೆದಿತ್ತು. ಸರ್ಕಾರದ ಈ ಕ್ರಮ ವಿವಾದಕ್ಕೆ ಕಾರಣವಾಗಿದೆ. ಅಲ್ಲದೇ ಮುಸ್ಲಿಮರಿಗೆ ವಿಶೇಷ ಸ್ಥಾನಮಾನ ಸಿಗಬೇಕೆಂದರೆ ಅವರು ಪಾಕಿಸ್ತಾನಕ್ಕೆ ತೆರಳಲಿ ಎಂದು ಶಿವಸೇನೆ ಇತ್ತೀಚೆಗಷ್ಟೇ ಸಾಮ್ನಾ ಪತ್ರಿಕೆಯಲ್ಲಿ ಸಂಪಾದಕೀಯ ಪ್ರಕಟಿಸಿತ್ತು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited