Untitled Document
Sign Up | Login    
Dynamic website and Portals
  
March 9, 2015

ಪಾಕಿಸ್ಥಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಖಚಿತ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಪ್ರಧಾನ ಮಂತ್ರಿ ನರೇಂದ್ರ ಮೋದಿ

ಇಸ್ಲಾಮಾಬಾದ್ : ಭಾರತ ಮತ್ತು ಪಾಕಿಸ್ಥಾನ ನಡುವಿನ ಸಂಬಂಧವನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಕಿಸ್ತಾನಕ್ಕೆ ತೆರಳಲಿದ್ದಾರೆ ಎಂದು ಪಾಕ್‌ ನ ವಿದೇಶಾಂಗ ವ್ಯವಹಾರಗಳ ಸಲಹೆಗಾರ ಸರ್ ತಾಜ್ ಅಜೀಜ್ ಖಚಿತಪಡಿಸಿದ್ದಾರೆ.

2016ರಲ್ಲಿ ನಮ್ಮ ರಾಷ್ಟ್ರ ಸಾರ್ಕ್ ಶೃಂಗಸಭೆ ಹಮ್ಮಿಕೊಳ್ಳಲಿದೆ. ಇದಕ್ಕೆ ಭಾರತದ ಪ್ರಧಾನಿ ನರೇಂದ್ರ ಮೋದಿ ವಿಶೇಷ ಆಹ್ವಾನಿತರಾಗಿ ಆಗಮಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಸಾರ್ಕ್ ಶೃಂಗಸಭೆಯ ಸದಸ್ಯ ರಾಷ್ಟ್ರಗಳಾದ ಆಪ್ಘಾನಿಸ್ಥಾನ, ಬಾಂಗ್ಲಾದೇಶ, ಭೂತಾನ್, ಭಾರತ, ಮಾಲ್ಡೀವ್ಸ್, ನೇಪಾಳ, ಪಾಕಿಸ್ಥಾನ ಮತ್ತು ಶ್ರೀಲಂಕಾ ರಾಷ್ಟ್ರಗಳ ಪ್ರತಿನಿಧಿಗಳು ಇದರಲ್ಲಿ ಭಾಗವಹಿಸಲಿದ್ದಾರೆಂದು ಮಾಹಿತಿ ನೀಡಿದ್ದಾರೆ.

2014ರಲ್ಲಿ ಪಾಕ್‌ ನ ರಾಯಭಾರಿಯು ಕಾಶ್ಮೀರ ಪ್ರತ್ಯೇಕತಾವಾದಿ ನಾಯಕರನ್ನು ಭೇಟಿ ಮಾಡಿದ ಕಾರಣಕ್ಕಾಗಿ ಎರಡು ರಾಷ್ಟ್ರಗಳ ನಡುವೆ ಮಾತುಕತೆ ನೆನೆಗುದಿಗೆ ಬಿದ್ದಿದೆ. ಈಗಾಗಲೇ ಭಾರತದ ವಿದೇಶಾಂಗ ಕಾರ್ಯದರ್ಶಿ ಎಸ್.ಜೈಶಂಕರ್ ಅವರು ಕಳೆದ ವಾರ ನಮ್ಮ ರಾಷ್ಟ್ರಕ್ಕೆ ಭೇಟಿ ನೀಡಿದ್ದರು. ಮಾತುಕತೆ ಫಲಪ್ರದಕಾರಿಯಾಗಿದ್ದು, ಹಳಿತಪ್ಪಿದ್ದ ರಾಜತಾಂತ್ರಿಕ ಸಂಬಂಧ ಸರಿದಾರಿಗೆ ಬರುವ ಲಕ್ಷಣಗಳಿವೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಏಳು ತಿಂಗಳ ನಂತರ ಉಭಯ ರಾಷ್ಟ್ರಗಳ ನಡುವೆ ಫಲಪ್ರದಕಾರಿಯಾದ ರಾಜತಾಂತ್ರಿಕ ಮಾತುಕತೆ ನಡೆದಿದೆ. ನಮ್ಮ ವಿದೇಶಾಂಗ ಕಾರ್ಯದರ್ಶಿಯು ಶೀಘ್ರದಲ್ಲೇ ಭಾರತಕ್ಕೆ ಭೇಟಿ ನೀಡಲಿದ್ದಾರೆ. ಶಾಂತಿ-ಸೌಹಾರ್ದತೆ, ಭಯೋತ್ಪಾದನೆ ನಿಗ್ರಹ, ಪರಸ್ಪರ ಸಹಕಾರ, ಎರಡು ರಾಷ್ಟ್ರಗಳ ನಡುವಿನ ಪ್ರಮುಖ ಅಜಂಡವಾಗಿದೆ ಎಂದು ಹೇಳಿದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited