Untitled Document
Sign Up | Login    
Dynamic website and Portals
  
March 9, 2015

ಮಮತಾ ಬ್ಯಾನರ್ಜಿಯಿಂದ ಪ್ರಧಾನಿ ಮೋದಿ ಭೇಟಿ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ-ಪ್ರಧಾನಿ ನರೇಂದ್ರ ಮೋದಿ ಭೇಟಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ-ಪ್ರಧಾನಿ ನರೇಂದ್ರ ಮೋದಿ ಭೇಟಿ

ನವದೆಹಲಿ : ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದು, ರಾಜ್ಯಕ್ಕೆ ಹಣಕಾಸು ನೆರವು ಕೋರಿದ್ದಾರೆ.

ಮೋದಿ ಪ್ರಧಾನಿಯಾಗಿ ಅಧಿಕಾರವಹಿಸಿಕೊಂಡ ನಂತರ ಇದೆ ಮೊದಲ ಬಾರಿಗೆ ಭೇಟಿ ಮಾಡಿರುವ ಮಮತಾ ಬ್ಯಾನರ್ಜಿ, ಪಶ್ಚಿಮ ಬಂಗಾಳಕ್ಕೆ ಹಣಕಾಸಿನ ನೆರವು ನೀಡುವಂತೆ ಮನವಿ ಮಾಡಿದ್ದಾರೆ. ಮೂಲಗಳ ಪ್ರಕಾರ, ಮೋದಿ ಕೇಂದ್ರ ಸರ್ಕಾರದ ನೆರವಿನ ಬಗ್ಗೆ ಯಾವುದೇ ಭರವಸೆ ನೀಡಿಲ್ಲ. ಆದರೆ, ಕಲ್ಲಿದ್ದಲು ಹರಾಜು ಮತ್ತು ಗಂಗಾ ಸ್ವಚ್ಛತಾ ಅಭಿಯಾನದಿಂದ ರಾಜ್ಯಕ್ಕೆ ಅನಕೂಲವಾಗಲಿದೆ ಎಂದು ಹೇಳಿದ್ದಾರೆ.

ಪ್ರಧಾನಿ ಭೇಟಿಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬ್ಯಾನರ್ಜಿ, ಪಶ್ಚಿಮ ಬಂಗಾಳ ಗರಿಷ್ಠ ಸಾಲದಿಂದ ಬಳಲುತ್ತಿದ್ದು, ಹಣಕಾಸು ನೆರವು ನೀಡುವಂತೆ ಕೇಳಿಕೊಂಡಿದ್ದೇನೆ. ಪ್ರಧಾನಿ ಅವರು ಪರಿಶೀಲಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಹೇಳಿದರು.

ಎನ್‌.ಡಿ.ಎ ಸರ್ಕಾರ ವಿವಾದಾತ್ಮಕ ಭೂಸ್ವಾಧೀನ ಮಸೂದೆಗೆ ಸಂಸತ್ತಿನ ಒಪ್ಪಿಗೆ ಪಡೆದುಕೊಳ್ಳಲು ಪರದಾಡುತ್ತಿರುವ ಸಂದರ್ಭದಲ್ಲೇ ಮಮತಾ ಬ್ಯಾನರ್ಜಿ ಅವರು ಮೋದಿ ಅವರನ್ನು ಭೇಟಿ ಮಾಡಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited