Untitled Document
Sign Up | Login    
Dynamic website and Portals
  
March 10, 2015

ಚರ್ಚ್ ಸ್ಟ್ರೀಟ್ ಬಾಂಬ್ ಸ್ಫೋಟಕ್ಕೂ ಪಾಟ್ನಾ ಸ್ಫೋಟಕ್ಕೂ ಸಾಮ್ಯತೆ

BW News Bureau : ಚರ್ಚ್‌ ಸ್ಟ್ರೀಟ್‌ ಬಾಂಬ್‌ ಸ್ಫೋಟ ಕುರಿತು ವಿಧಿ ವಿಜ್ಞಾನ ಪ್ರಯೋಗಾಲಯವು ತನ್ನ ವರದಿಯನ್ನು ನಗರ ಪೊಲೀಸರಿಗೆ ಸಲ್ಲಿಸಿದ್ದು, ಈ ವರದಿಯಲ್ಲಿ ಪಾಟ್ನಾ ಸ್ಫೋಟದಲ್ಲಿ ಸಿಕ್ಕ ಅವಶೇಷಗಳಿಗೂ, ಚರ್ಚ್‌ಸ್ಟ್ರೀಟ್‌ನಲ್ಲಿ ಸಿಕ್ಕ ವಸ್ತುಗಳಿಗೂ ಸಾಮ್ಯತೆ ಕಂಡುಬಂದಿದೆ ಎಂದು ತಿಳಿಸಲಾಗಿದೆ.

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ನಗರ ಪೊಲೀಸ್‌ ಆಯುಕ್ತ ಎಂ.ಎನ್‌.ರೆಡ್ಡಿ, 2014ರ ಡಿ.28ರಂದು ಚರ್ಚ್‌ಸ್ಟ್ರೀಟ್‌ನಲ್ಲಿ ನಡೆದಿದ್ದ ಬಾಂಬ್‌ ಸ್ಫೋಟದ ಸ್ಥಳದಲ್ಲಿ ಪತ್ತೆಯಾಗಿದ್ದ ವಸ್ತುಗಳ ಬಗೆಗಿನ ವಿಧಿವಿಜ್ಞಾನ ಪ್ರಯೋಗಾಲಯದ ವರದಿ ದೊರಕಿದೆ. ವರದಿಯಲ್ಲಿ ಬಾಂಬ್‌ ಸ್ಫೋಟ ಪ್ರಕರಣದ ತನಿಖೆಗೆ ಅನುಕೂಲವಾಗುವ ಅನೇಕ ವಿಷಯಗಳಿವೆ. ಅದರ ಆಧಾರದ ಮೇಲೆ ತನಿಖೆ ಚುರುಕುಗೊಳಿಸಲಾಗುವುದು ಎಂದು ಹೇಳಿದ್ದಾರೆ.

ಮೂಲಗಳ ಪ್ರಕಾರ ಚರ್ಚ್‌ ಸ್ಟ್ರೀಟ್‌ ಸ್ಫೋಟದಲ್ಲಿ ಸಿಮಿ ಸಂಘಟನೆಯ ಕೈವಾಡವಿದೆ ಎಂಬ ಅನುಮಾನ ಬಲಗೊಳ್ಳುವಂತಹ ಹಲವಾರು ಮಾಹಿತಿಗಳು ಪೊಲೀಸರಿಗೆ ಲಭ್ಯವಾಗಿದೆ ಎನ್ನಲಾಗಿದ್ದು, ಈ ದಿಸೆಯಲ್ಲಿ ತನಿಖೆ ಮುಂದುವರೆದಿದೆ.

2013ರಲ್ಲಿ ನರೇಂದ್ರ ಮೋದಿ ಪಾಟ್ನಾದಲ್ಲಿ ಚುನಾವಣಾ ಪ್ರಚಾರ ಸಭೆ ನಡೆಸುತ್ತಿದ್ದ ವೇಳೆಯಲ್ಲಿ ಸಂಭವಿಸಿದ ಸ್ಫೋಟಕ್ಕೂ ಚರ್ಚ್‌ ಸ್ಟ್ರೀಟ್‌ ಬಾಂಬ್‌ ಸ್ಫೋಟಕ್ಕೂ ಸಾಮ್ಯತೆ ಇರುವುದು ವರದಿಯಿಂದ ತಿಳಿದು ಬಂದಿದೆ. ಅದಕ್ಕೆ ಪೂರಕವೆಂಬಂತೆ ಪಾಟ್ನಾ ಬಾಂಬ್‌ ಸ್ಫೋಟದ ಆರೋಪಿಗಳಾಗಿರುವ ಶಂಕಿತ ಉಗ್ರರಾದ ಉಮರ್ ಸಿದ್ದಿಕಿ ಮತ್ತು ಹೈದರ್ ವಿಚಾರಣೆ ವೇಳೆಯಲ್ಲೂ ಕೆಲವೊಂದು ಮಾಹಿತಿ ನೀಡಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : General

ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
  • ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
  • ದೇಶಿ ನಿರ್ಮಿತ ಮೂರನೇ ಜಲಾಂತರ್ಗಾಮಿ ನೌಕೆ ಪ್ರಾಜೆಕ್ಟ್‌ 28ರ ಅಡಿಯಲ್ಲಿ ನಿರ್ಮಾಣಗೊಂಡ ಐಎನ್‌ಎಸ್‌ ಕಿಲ್ತಾನ್‌ ನೌಕೆಯನ್ನು ವಿಶಾಖಪಟ್ಟಣದ ನೌಕಾ ನೆಲೆಯಲ್ಲಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಲೋಕಾರ್ಪಣೆ ಮಾಡಿದರು.
  • ಆರುಷಿ ಹತ್ಯೆ ಪ್ರಕರಣ: ತಲ್ವಾರ್ ದಂಪತಿಗಳು ಖುಲಾಸೆ;ಅಲಹಾಬಾದ್ ಹೈಕೋರ್ಟ್ ತೀರ್ಪು
  • ಅ.12ರ ಮಧ್ಯ ರಾತ್ರಿಯಿಂದ ಪೆಟ್ರೋಲ್ ಬಂಕ್ ಬಂದ್
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited