Untitled Document
Sign Up | Login    
Dynamic website and Portals
  
March 12, 2015

ಏ.2ರಿಂದ ಬೆಂಗಳೂರಿನಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ

ನವದೆಹಲಿ/ಬೆಂಗಳೂರು : ಏಪ್ರಿಲ್‌ 2ರಿಂದ ಮೂರು ದಿನಗಳ ಕಾಲ ಬಿಜೆಪಿರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಬೆಂಗಳೂರಿನಲ್ಲಿ ನಡೆಯಲಿದೆ.

ಪಕ್ಷದ ಪಾಲಿಗೆ ಅತ್ಯಂತ ಮಹತ್ವದ ಕಾರ್ಯಕ್ರಮವಾಗಿರುವ ಈ ಕಾರ್ಯಕಾರಿಣಿ ಸಭೆಯನ್ನು ಯಶಸ್ವಿಗೊಳಿಸಲು ದೆಹಲಿಯಲ್ಲಿ ನಡೆದ ಪಕ್ಷದ ರಾಜ್ಯ ಘಟಕದ ಕೋರ್ ಕಮಿಟಿ ಸಭೆ ತೀರ್ಮಾನಿಸಿದೆ.

ಈ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ, ಹಿರಿಯ ನಾಯಕರಾದ ಎಲ್‌.ಕೆ.ಅಡ್ವಾಣಿ ಸೇರಿದಂತೆ ಅನೇಕರು ಪಾಲ್ಗೊಳ್ಳಲಿದ್ದಾರೆ. ಕಾರ್ಯಕಾರಿಣಿಯ 2ನೇ ದಿನವಾದ ಏ.3ರಂದು ನಗರದಲ್ಲಿ ಬಹಿರಂಗ ಸಮಾವೇಶವನ್ನು ನಡೆಸಲು ನಿರ್ಧರಿಸಲಾಗಿದ್ದು, ಪ್ರಧಾನಿ ಮೋದಿ, ಅಮಿತ್ ಶಾ ಕಾರ್ಯಕರ್ತರು ಹಾಗೂ ಜನರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಕೋರ್ ಕಮಿಟಿ ಸಭೆಯ ನಂತರ ಸುದ್ದಿಗಾರರಿಗೆ ಮಾಹಿತಿ ನೀಡಿದ ರಾಜ್ಯಾಧ್ಯಕ್ಷ ಪ್ರಹ್ಲಾದ್‌ ಜೋಶಿ, ಈ ಕಾರ್ಯಕಾರಿಣಿ ಸಭೆಯನ್ನು ಯಶಸ್ವಿಗೊಳಿಸುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಪಕ್ಷದ ರಾಷ್ಟ್ರೀಯ ಸಮಿತಿಯ ಮಾರ್ಗದರ್ಶನದಂತೆ ಕಾರ್ಯಕಾರಿಣಿಗೆ ಬೇಕಾದ ಎಲ್ಲ ಸಿದ್ಧತೆಗಳನ್ನೂ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಪಕ್ಷದ ರಾಜ್ಯ ಘಟಕದ ಸದಸ್ಯತ್ವ ಅಭಿಯಾನದ ಅಂಗವಾಗಿ ಸದಸ್ಯತ್ವವನ್ನು ಒಂದು ಕೋಟಿಗೆ ತಲುಪಿಸುವ ಬಗ್ಗೆ ಕೋರ್ ಕಮಿಟಿ ಸಭೆಯಲ್ಲಿ ವಿಸ್ತೃತವಾಗಿ ಸಮಾಲೋಚಿಸಲಾಗಿದೆ. ಇದುವರೆಗೆ ಸುಮಾರು 64 ಲಕ್ಷ ಸದಸ್ಯತ್ವ ನೋಂದಣಿ ಮಾಡಲಾಗಿದೆ. ರಾಷ್ಟ್ರೀಯ ಘಟಕ ನೀಡಿರುವ ಗಡವಿನ ಪ್ರಕಾರ ಮಾರ್ಚ್‌ ಅಂತ್ಯದೊಳಗಾಗಿ ಒಂದು ಕೋಟಿ ಗುರಿ ತಲುಪಬೇಕಾಗಿದೆ. ಹೀಗಾಗಿ ಇನ್ನುಳಿದ 20 ದಿನಗಳಲ್ಲಿ ಸದಸ್ಯತ್ವ ನೋಂದಣಿಗೆ ಹೆಚ್ಚಿನ ಒತ್ತು ನೀಡಿ ಅನುಷ್ಠಾನಗೊಳಿಸುವಂತೆ ಪಕ್ಷದ ರಾಜ್ಯ ಉಸ್ತುವಾರಿ ಕೆ.ಮುರಳೀಧರರಾವ್‌ ರಾಜ್ಯ ನಾಯಕರಿಗೆ ಸಲಹೆ ನೀಡಿದರು ಎಂದು ತಿಳಿದು ಬಂದಿದೆ.

ಇನ್ನುಳಿದಂತೆ ಅರ್ಕಾವತಿ ಡಿನೋಟಿಫಿಕೇಶನ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಸುತ್ತಿರುವ ಕಾನೂನು ಹೋರಾಟ, ಬರುವ ರಾಜ್ಯ ವಿಧಾನಮಂಡಲದ ಬಜೆಟ್‌ ಅಧಿವೇಶನದಲ್ಲಿ ರಾಜ್ಯ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವಂಥ ವಿಷಯಗಳನ್ನು ಪ್ರಸ್ತಾಪಿಸಬೇಕು ಎಂಬುದರ ಬಗ್ಗೆ ಕೋರ್ ಕಮಿಟಿ ಸಭೆಯಲ್ಲಿ ಚರ್ಚಿಸಲಾಯಿತು. ಸಭೆಯಲ್ಲಿ ಮುರಳೀಧರರಾವ್‌, ಜೋಶಿ ಅವರಲ್ಲದೆ ಇತರ ನಾಯಕರಾದ ಬಿ.ಎಸ್‌.ಯಡಿಯೂರಪ್ಪ, ಜಗದೀಶ್‌ ಶೆಟ್ಟರ್, ಅನಂತಕುಮಾರ್, ಡಿ.ವಿ.ಸದಾನಂದಗೌಡ, ಕೆ.ಎಸ್‌.ಈಶ್ವರಪ್ಪ, ಆರ್.ಅಶೋಕ್‌ ಅವರು ಪಾಲ್ಗೊಂಡಿದ್ದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited