Untitled Document
Sign Up | Login    
Dynamic website and Portals
  
March 12, 2015

ನಿರ್ದೇಶಕ ಸಿದ್ದಲಿಂಗಯ್ಯ ನಿಧನ

ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಸಿದ್ದಲಿಂಗಯ್ಯ  ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಸಿದ್ದಲಿಂಗಯ್ಯ

ಬೆಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಸಿದ್ದಲಿಂಗಯ್ಯ ಮಾ.12ರಂದು ಮಧ್ಯಾಹ್ನ ನಿಧನರಾಗಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಸಿದ್ದಲಿಂಗಯ್ಯ, ಕಳೆದ ಕೆಲವು ದಿನಗಳಿಂದ ರಾಜಾಜಿನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸಿದ್ದಲಿಂಗಯ್ಯ ಅವರಿಗೆ ಎಚ್1ಎನ್1 ಸೋಂಕು ಕೂಡ ಆವರಿಸಿತ್ತು. ಬಂಗಾರದ ಮನುಷ್ಯ, ಭೂತಯ್ಯನ ಮಗ ಅಯ್ಯು, ದೂರದಬೆಟ್ಟ , ಅಜೇಯ ಚಿತ್ರಗಳನ್ನು ಸೇರಿದಂತೆ 23 ಚಿತ್ರಗಳನ್ನು ಸಿದ್ಧಲಿಂಗಯ್ಯ ಅವರು ನಿರ್ದೇಶಿಸಿದ್ದರು. ಇದಲ್ಲದೆ ನಿರ್ಮಾಣ ಕ್ಷೇತ್ರದಲ್ಲೂ ತೊಡಗಿಕೊಂಡಿದ್ದರು.

ಹಲವಾರು ರಾಷ್ಟ್ರ-ರಾಜ್ಯ ಪ್ರಶಸ್ತಿಗಳು ಅವರಿಗೆ ಸಂದಿದ್ದವು. ಗಣ್ಯರು ಹಾಗೂ ಚಿತ್ರರಂಗದ ಅಪಾರ ಅಭಿಮಾನಿಗಳು ಸಿದ್ದಲಿಂಗಯ್ಯ ಅವರ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.

ಸಿದ್ದಲಿಂಗಯ್ಯ ಅವರ ಬಂಗಾರದ ಮನುಷ್ಯ ಸಿನಿಮಾ ಕನ್ನಡ ಚಿತ್ರರಂಗದಲ್ಲಿ ದಾಖಲೆಯನ್ನು ನಿರ್ಮಿಸಿತ್ತು. 1993-1994ನೇ ಸಾಲಿನಲ್ಲಿ ಅವರಿಗೆ ಪುಟ್ಟಣ್ಣ ಕಣಗಾಲ್ ಪ್ರಶಸ್ತಿಯೂ ದೊರೆತಿತ್ತು. 1969ರಲ್ಲಿ ಮೇಯರ್ ಮುತ್ತಣ್ಣ ಚಿತ್ರದ ಮೂಲಕ ನಿರ್ದೇಶಕರಾಗಿದ್ದ ಸಿದ್ದಲಿಂಗಯ್ಯ ಚಿತ್ರಗಳು ಸಾಮಾಜಿಕ ಕಳಕಳಿಗೆ ಪ್ರಖ್ಯಾತವಾಗಿದ್ದವು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : General

ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
  • ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
  • ದೇಶಿ ನಿರ್ಮಿತ ಮೂರನೇ ಜಲಾಂತರ್ಗಾಮಿ ನೌಕೆ ಪ್ರಾಜೆಕ್ಟ್‌ 28ರ ಅಡಿಯಲ್ಲಿ ನಿರ್ಮಾಣಗೊಂಡ ಐಎನ್‌ಎಸ್‌ ಕಿಲ್ತಾನ್‌ ನೌಕೆಯನ್ನು ವಿಶಾಖಪಟ್ಟಣದ ನೌಕಾ ನೆಲೆಯಲ್ಲಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಲೋಕಾರ್ಪಣೆ ಮಾಡಿದರು.
  • ಆರುಷಿ ಹತ್ಯೆ ಪ್ರಕರಣ: ತಲ್ವಾರ್ ದಂಪತಿಗಳು ಖುಲಾಸೆ;ಅಲಹಾಬಾದ್ ಹೈಕೋರ್ಟ್ ತೀರ್ಪು
  • ಅ.12ರ ಮಧ್ಯ ರಾತ್ರಿಯಿಂದ ಪೆಟ್ರೋಲ್ ಬಂಕ್ ಬಂದ್
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited