ಇಸ್ಲಾಮಾಬಾದ್ : ತಾಲಿಬಾನ್ ಆತ್ಮಹತ್ಯಾ ಬಾಂಬರ್ ಗಳು ಲಾಹೋರ್ ನಲ್ಲಿನ ಎರಡು ಚರ್ಚ್ ಗಳನ್ನು ಗುರಿಯಾಗಿರಿಸಿಕೊಂಡು ನಡೆಸಿದ ದಾಳಿಯಲ್ಲಿ ಹತ್ತು ಮಂದಿ ಸಾವನ್ನಪ್ಪಿದ್ದು, 50ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.
ತಾಲಿಬಾನ್ ಉಗ್ರರು ಯೂಹಾನಾಬಾದ್ ಪ್ರದೇಶದಲ್ಲಿರುವ ರೋಮನ್ ಕ್ಯಾಥೋಲಿಕ್ ಚರ್ಚ್ ಹಾಗೂ ಕ್ರೈಸ್ಟ್ ಚರ್ಚ್ ಅನ್ನು ಗುರಿಯಾಗಿರಿಸಿ ದಾಳಿ ನಡೆಸಿದ್ದರು. ಭಾನುವಾರದ ಪ್ರಾರ್ಥನೆ ಸಲ್ಲಿಸುತ್ತಿದ್ದ ವೇಳೆ ಆತ್ಮಹತ್ಯಾ ಬಾಂಬ್ ದಾಳಿ ನಡೆಸಲಾಗಿದೆ.
ಏಕಾಏಕಿ ನಡೆದ ದಾಳಿಗೆ ಪ್ರಾರ್ಥನೆ ಸಲ್ಲಿಸುತ್ತಿದ್ದ ನೂರಾರು ಮಂದಿ ದಿಕ್ಕಾಪಾಲಾಗಿ ಓಡಿರುವುದಾಗಿ ಓಡಿದ್ದಾರೆ. ಈ ಸಂದರ್ಭದಲ್ಲಿ ನೂಕುನುಗ್ಗಲು ಉಂಟಾಗಿ ಹಲವರು ಕಾಲ್ತುಳಿತಕ್ಕೆ ಸಿಲುಕಿದ್ದಾರೆ. ಇನ್ನೂ ಕೆಲವರು ಜೀವ ಉಳಿಸಿಕೊಳ್ಳಲು ಓಡಿರುವುದಾಗಿ ತಿಳಿದುಬಂದಿದೆ.
ಸ್ಫೋಟದಲ್ಲಿ ಪೊಲೀಸ್ ಸೇರಿ 10 ಮಂದಿ ಸಾವನ್ನಪ್ಪಿದ್ದಾರೆ. ಮಹಿಳೆಯರು, ಮಕ್ಕಳು ಸೇರಿ 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಲಾಹೋರ್ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.