ನವದೆಹಲಿ : ನಾನು ಹಂಗಾಮಿ ಮುಖ್ಯಮಂತ್ರಿಯಾಗಿದ್ದರೂ ಸಹ ಮೈಕ್ ಮತ್ತು ರಿಮೋಟ್ ಕಂಟ್ರೋಲ್ ಬೇರೆಯವರ (ಕೇಜ್ರಿವಾಲ್) ಬಳಿ ಇಲ್ಲ. ಅದು ನನ್ನ ಹತ್ತಿರವೇ ಇದೆ ಎಂದು ಅರವಿಂದ್ ಕೇಜ್ರಿವಾಲ್ ಅನುಪಸ್ಥಿತಿಯಲ್ಲಿ ರಾಜ್ಯಭಾರದ ಹೊಣೆ ಹೊತ್ತಿರುವ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸ್ಪಷ್ಟಪಡಿಸಿದ್ದಾರೆ.
ಆಡಳಿತ ನನ್ನ ನಿಯಂತ್ರಣದಲ್ಲಿದ್ದು, ಮುಖ್ಯಮಂತ್ರಿ ಕೇಜ್ರಿವಾಲ್ ಅನುಪಸ್ಥಿತಿಯಲ್ಲಿ ಸರ್ಕಾರ ಸುಸೂತ್ರವಾಗಿ ನಡೆಯುತ್ತಿದೆ ಎಂದು ಸಿಸೋಡಿಯಾ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಕೇಜ್ರಿವಾಲ್ ಬೆಂಗಳೂರಿನಲ್ಲಿ ಪ್ರಕೃತಿ ಚಿಕಿತ್ಸೆ ಪಡೆಯುತ್ತಿದ್ದು, ಅಲ್ಲಿಂದಲೇ ದೆಹಲಿಯ ಆಡಳಿತ ನಡೆಸುತ್ತಿದ್ದಾರೆ ಎಂಬ ವಿಪಕ್ಷಗಳ ಟೀಕೆಗೆ ಸಿಸೋಡಿಯಾ ತಿರುಗೇಟು ನೀಡಿದ್ದಾರೆ.