ನವದೆಹಲಿ : 'ಕಾಶ್ಮೀರ' ಪ್ರತ್ಯೇಕತಾವಾದಿಗಳು ಮಾ.23ರಂದು ದೆಹಲಿಯಲ್ಲಿ ಪಾಕಿಸ್ತಾನ ದಿನವನ್ನು ಆಚರಿಸಲಿದ್ದಾರೆ.
ನವದೆಹಲಿಯಲ್ಲಿರುವ ಚಾಣಕ್ಯಪುರಿಯಲ್ಲಿನ ಪಾಕಿಸ್ತಾನ ಹೈಕಮಿಷನ್ ನಲ್ಲಿ ಪ್ರತ್ಯೇಕತಾವಾದಿಗಳು ಪಾಕಿಸ್ತಾನದ ಗಣತಂತ್ರ ದಿನವನ್ನು ಆಚರಿಸಲಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ವಾರ ಪಾಕ್ ನ ರಾಯಭಾರಿ ಅಬ್ದುಲ್ ಬಸಿತ್, ಕಾಶ್ಮೀರ ಪ್ರತ್ಯೇಕತಾವಾದಿ ಸಯೀದ್ ಶಾ ಗಿಲಾನಿ ಅವರನ್ನು ಭೇಟಿ ಮಾಡಿದ್ದರು.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪಾಕಿಸ್ತಾನ ದಿನಾಚರಣೆ ಆಚರಿಸಲು ಕಾಶ್ಮೀರ ಪ್ರತ್ಯೇಕತಾವಾದಿಗಳಿಗೆ ಆಹ್ವಾನ ನೀಡುವುದಕ್ಕೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆ ಇಲ್ಲ ಎಂದು ಭಾರತ ಸರ್ಕಾರ ತಿಳಿಸಿದೆ. ಇತ್ತೀಚೆಗಷ್ಟೇ ವಿದೇಶಾಂಗ ಕಾರ್ಯದರ್ಶಿ ಜೈಶಂಕರ್ ಹಾಗೂ ಪಾಕಿಸ್ತಾನ ವಿದೇಶಾಂಗ ಕಾರ್ಯದರ್ಶಿಗಳ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ಬಗ್ಗೆ ಚರ್ಚಿಸಲು ಕಾಶ್ಮೀರ ಪ್ರತ್ಯೇಕತಾವಾದಿಗಳಿಗೆ ಪಾಕಿಸ್ತಾನ ದಿನಾಚರಣೆಯಲ್ಲಿ ಪಾಲ್ಗೊಳ್ಳುವಂತೆ ಪಾಕ್ ಹೈಕಮಿಷನರ್ ಅಬ್ದುಲ್ ಬಸಿತ್ ಆಹ್ವಾನ ನೀಡಿದ್ದಾರೆ ಎಂದು ಹೇಳಲಾಗಿದೆ.
1956ರ ಮಾರ್ಚ್ 23ರಂದು ಇಸ್ಲಾಮಿಕ್ ಗಣರಾಜ್ಯ ಅಥವಾ ಪಾಕಿಸ್ತಾನ ಗಣರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. 1956ರಲ್ಲಿ ಪಾಕಿಸ್ತಾನವನ್ನು ವಿಶ್ವದ ಪ್ರಥಮ ಇಸ್ಲಾಮಿಕ್ ಗಣರಾಜ್ಯವೆಂದು ಘೋಷಿಸಲಾಗಿತ್ತು.