Untitled Document
Sign Up | Login    
Dynamic website and Portals
  
March 18, 2015

ಡಿ.ಕೆ ರವಿ ಸಾವು ಪ್ರಕರಣ: ಸಿಬಿಐ ತನಿಖೆಗೆ ತೀವ್ರಗೊಂಡ ಒತ್ತಡ

ಬೆಂಗಳೂರು : ಐ.ಎ.ಎಸ್ ಅಧಿಕಾರಿ ಡಿ.ಕೆ ರವಿ ನಿಗೂಢ ಸಾವಿನ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಆಗ್ರಹಿಸಿ ಪ್ರತಿಪಕ್ಷಗಳು ನಡೆಸುತ್ತಿದ್ದ ಪ್ರತಿಭಟನೆ ಮುಂದುವರೆದಿದೆ.

ಸಿಬಿಸಿ ತನಿಖೆಗೆ ಆಗ್ರಹಿಸಿ ಅಹೋರಾತ್ರಿ ಪ್ರತಿಭಟನೆ ನಡೆಸಿದ್ದ ಜೆಡಿಎಸ್ ಹಾಗೂ ಬಿಜೆಪಿ ಸದಸ್ಯರು ಮಾ.18ರ ವಿಧಾನಸಭಾ ಕಲಾಪ ಪ್ರಾರಂಭವಾಗುತ್ತಿದ್ದಂತೆಯೇ ಸದನದ ಭಾವಿಗಿಳಿದು ಪ್ರತಿಭಟನೆ ಪ್ರಾರಂಭಿಸಿದರು. ಪ್ರತಿಪಕ್ಷಗಳ ಪಟ್ಟಿಗೆ ಬಗ್ಗದ ಸರ್ಕಾರ, ಸಿಬಿಐ ತನಿಖೆಗೆ ಪ್ರಕರಣವನ್ನು ಒಪ್ಪಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.

ಪ್ರತಿಪಕ್ಷದ ಸದಸ್ಯರೂ ತಮ್ಮ ಪಟ್ಟನ್ನು ಮುಂದುವರೆಸಿದ್ದು, ಸಿಬಿಐ ತನಿಖೆಗೆ ಒಪ್ಪಿಸುವವರೆಗೂ ಪ್ರತಿಭಟನೆ ಕೈಬಿಡುವುದಿಲ್ಲ ಎಂದು ಹೇಳಿದ್ದಾರೆ. ಇದೇ ವೇಳೆ ಮಾತನಾಡಿದ ಜೆಡಿಎಸ್ ನಾಯಕ ಹೆಚ್.ಡಿ ಕುಮಾರಸ್ವಾಮಿ, ಸರ್ಕಾರ ಸಿಬಿಐ ತನಿಖೆಗೆ ವಹಿಸದೇ ಇರುವುದರಿಂದ ಸರ್ಕಾರದ ಮೇಲೆ ಅನುಮಾನ ವ್ಯಕ್ತವಾಗುತ್ತಿದೆ. ಡಿ.ಕೆ ರವಿ ಸಾವಿನ ಪ್ರಕರಣದಲ್ಲಿ ಸರ್ಕಾರದ ತಪ್ಪಿಲ್ಲ ಎಂದಾದರೆ ಸಿಬಿಐ ತನಿಖೆಗೆ ವಹಿಸಲು ಹಿಂಜರಿಯುತ್ತಿರುವುದೇಕೆ ಎಂದು ಪ್ರಶ್ನಿಸಿದ್ದಾರೆ.

ಡಿ.ಕೆ ರವಿ ಅವರ ಅಂತ್ಯಸಂಸ್ಕಾರದ ವೇಳೆ ಸಾರ್ವಜನಿಕರು ಸಚಿವರಿಗೆ ಧಿಕ್ಕಾರ ಕೂಗುತ್ತಿದ್ದರು. ಪ್ರಕರಣದ ಸಂಬಂಧ ಸರ್ಕಾರದ ವಿರುದ್ಧ ಜನಾಭಿಪ್ರಾಯ ರೂಪುಗೊಳ್ಳುತ್ತಿರುವುದಕ್ಕೆ ಇದೇ ಸಾಕ್ಷಿ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಪ್ರತಿಪಕ್ಷಗಳ ಗದ್ದಲ ತೀವ್ರಗೊಂಡ ಹಿನ್ನೆಲೆಯಲ್ಲಿ ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ, ಕಲಾಪವನ್ನು ಮಧ್ಯಾಹ್ನ ಮೂರುಗಂಟೆ ವರೆಗೆ ಮುಂದೂಡಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited