Untitled Document
Sign Up | Login    
Dynamic website and Portals
  
March 18, 2015

ಡಿ.ಕೆ ರವಿ ಸಾವು ಪ್ರಕರಣ: ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ ಬಿಜೆಪಿ ನಿಯೋಗ

ನವದೆಹಲಿ : 'ಐ.ಎ.ಎಸ್' ಅಧಿಕಾರಿ ಡಿ.ಕೆ ರವಿ ಅವರ ನಿಗೂಢ ಸಾವಿನ ಪ್ರಕರಣವನ್ನು ಸಿಬಿಐ ಗೆ ವಹಿಸಬೇಕೆಂದು ರಾಜ್ಯ ಬಿಜೆಪಿ ಸಂಸದರ ನಿಯೋಗ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಮನವಿ ಮಾಡಿದೆ.

ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ ಯಡಿಯೂರಪ್ಪ, ಅನಂತ್ ಕುಮಾರ್, ಡಿ.ವಿ ಸದಾನಂದ ಗೌಡ, ಪ್ರಹ್ಲಾದ್ ಜೋಷಿ ನೇತೃತ್ವದ ನಿಯೋಗ, ದಕ್ಷ ಅಧಿಕಾರಿಯಾಗಿದ್ದ ರವಿ ಅವರ ಸಾವು ಅನುಮಾನಾಸ್ಪದವಾಗಿದ್ದು ಈ ಬಗ್ಗೆ ಸಿಬಿಐ ತನಿಖೆ ನಡೆಸಬೇಕೆಂದು ಮನವಿ ಪತ್ರ ಸಲ್ಲಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜಿಜು, ರಾಜ್ಯ ಸರ್ಕಾರದಿಂದ ವರದಿ ಬಂದ ಬಳಿಕ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಮನವಿ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅನಂತ್ ಕುಮಾರ್, ಡಿ.ಕೆ ರವಿ ಅವರ ಅನುಮಾನಾಸ್ಪದ ಸಾವಿನ ಬಗ್ಗೆ ರಾಜನಾಥ್ ಸಿಂಗ್ ಅವರಿಗೆ ಮನವರಿಕೆ ಮಾಡಿಕೊಟ್ಟಿದ್ದೇವೆ. ಕೇಂದ್ರ ಸರ್ಕಾರ ಸಿಬಿಐ ತನಿಖೆ ನಡೆಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited