Untitled Document
Sign Up | Login    
Dynamic website and Portals
  
March 19, 2015

ಬಿಬಿಎಂಪಿ ಅಕ್ರಮ: ಮೇಯರ್,ಉಪಮೇಯರ್,ಆಯುಕ್ತರಿಗೆ ನೋಟಿಸ್

BW News Bureau : ಬಿಬಿಎಂಪಿ ಅಕ್ರಮಗಳ ವಿರುದ್ಧ ಕ್ರಮ ಕೈಗೊಳ್ಳುವ ಮುನ್ನ ರಾಜ್ಯ ಸರ್ಕಾರ ಮೇಯರ್, ಉಪ ಮೇಯರ್ ಹಾಗೂ ಆಯುಕ್ತರಿಗೆ ನೋಟಿಸ್ ಜಾರಿಗೊಳಿಸಿದೆ.

ಬಿಬಿಎಂಪಿಯಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ಐಎಎಸ್ ಅಧಿಕಾರಿ ರಾಜೇಂದ್ರಕುಮಾರ್ ಕಟಾರಿಯಾ ನೀಡಿದ ತನಿಖಾ ವರದಿ ಅನುಸಾರ ಕ್ರಮ ಕೈಗೊಳ್ಳಲು ಸರ್ಕಾರ ನಿರ್ಧರಿಸಿದೆ. ಆದರೆ ಕೆಎಂಸಿ ಕಾಯ್ದೆ ಪ್ರಕಾರ ಮುಂಗಡ ಸೂಚನೆ ನೀಡಬೇಕಿರುವುದರಿಂದ ಸರ್ಕಾರ ಬುಧವಾರ ಬಿಬಿಎಂಪಿಯ ಎಲ್ಲ ಮುಖ್ಯಸ್ಥರಿಗೂ ನೋಟಿಸ್ ನೀಡಿ ಎಚ್ಚರಿಸಿದೆ. ಅಷ್ಟೇ ಅಲ್ಲದೆ ಕಟಾರಿಯಾ ತನಿಖಾ ವರದಿಯಲ್ಲಿ ಪ್ರಸ್ತಾಪಿಸಿದ ಅಕ್ರಮಗಳ ಬಗ್ಗೆ ಪೂರಕ ದಾಖಲೆ ಹಾಗೂ ಸ್ಪಷ್ಟ ವಿವರಣೆಯನ್ನು ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯವರಿಗೆ ಮಾರ್ಚ್ 30ರೊಳಗೆ ಸಲ್ಲಿಸುವಂತೆ ಸೂಚಿಸಲಾಗಿದೆ.

ಈ ಸಂಬಂಧ ನಗರಾಭಿವೃದ್ಧಿ ಇಲಾಖೆ ಅಧೀನ ಕಾರ್ಯದರ್ಶಿ ಗೋಪಾಲಯ್ಯಅವರು ಮೇಯರ್ ಶಾಂತಕುಮಾರಿ, ಉಪ ಮೇಯರ್ ರಂಗಣ್ಣ ಹಾಗೂ ಆಯುಕ್ತ ಲಕ್ಷ್ಮೀ ನಾರಾಯಣ ಅವರಿಗೆ ನೋಟಿಸ್ ರವಾನಿಸಿದ್ದಾರೆ.

2008ರಿಂದ 2013ರ ವರೆಗಿನ ಅವಧಿಯಲ್ಲಿ ಅನೇಕ ಕಾಮಗಾರಿಗಳನ್ನು ನಡೆಸುವಾಗ ಮತ್ತು ವಿವಿಧ ಕಾರ್ಯಕ್ರಮಗಳನ್ನು ಅನುಷ್ಠಾನ ಗೊಳಿಸುವಾಗ ಅಕ್ರಮಗಳು ನಡೆದಿರುವ ಬಗ್ಗೆ ಸಿಎಜಿ ವರದಿಯಲ್ಲಿ ಉಲ್ಲೇಖಿಸ ಲಾಗಿತ್ತು. ಹಾಗೆಯೇ ಉಪ ಲೋಕಾಯುಕ್ತ ನ್ಯಾ. ಸುಭಾಷ್ ಅಡಿ ಅವರು ಬಿಬಿಎಂಪಿ ಅಕ್ರಮಗಳ ಬಗ್ಗೆ ಪ್ರಸ್ತಾಪಿಸಿದ್ದರು. ಇದರಿಂದ ನೂರಾರು ಕೋಟಿ ರುಪಾಯಿ ನಷ್ಟವಾಗಿದೆ ಎಂಬ ವರದಿ .

ಅಕ್ರಮಗಳು ಹೆಚ್ಚಾಗಿರುವುದರಿಂದ ಅದನ್ನು ನಿಭಾಯಿಸುವಲ್ಲಿ ಬಿಬಿಎಂಪಿ ಆಡಳಿತ ಸಂಪೂರ್ಣ ವಿಫಲವಾಗಿದೆ. ಹಣಕಾಸಿನ ಸೂಕ್ತ ನಿರ್ವಹಣೆ ಇಲ್ಲದೆ ಬಿಬಿಎಂಪಿ ಇನ್ನೂ ಹೆಚ್ಚಿನ ಆರ್ಥಿಕ ನಷ್ಟಕ್ಕೆ ಒಳಗಾಗುತ್ತದೆ ಇದೇ ಕಾರಣಕ್ಕಾಗಿ ರಾಜ್ಯ ಸರ್ಕಾರ ಅನಿವಾರ್ಯವಾಗಿ ಮಧ್ಯ ಪ್ರವೇಶ ಮಾಡಿ, ಅಕ್ರಮಗಳ ಬಗ್ಗೆ ತನಿಖೆಗೆ ಸೂಚಿಸಿತ್ತು. ರಾಜೇಂದ್ರಕುಮಾರ್ ಕಟಾರಿಯಾ ಅವರಿಗೆ ವಹಿಸಿತ್ತು. ಈಗ ತನಿಖಾ ವರದಿ ಪ್ರಕಾರ ಕ್ರಮಕೈಗೊಳ್ಳಲಾಗುತ್ತಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : BBMP

ರಸ್ತೆ ಗುಂಡಿ ಮುಚ್ಚಲು 10 ದಿನಗಳ ಗಡುವು: ಬಿಬಿಎಂಪಿ ಅಧಿಕಾರಿಗಳಿಗೆ ಸಿಎಂ ಆದೇಶ
  • ರಸ್ತೆ ಗುಂಡಿ ಮುಚ್ಚಲು 10 ದಿನಗಳ ಗಡುವು: ಬಿಬಿಎಂಪಿ ಅಧಿಕಾರಿಗಳಿಗೆ ಸಿಎಂ ಆದೇಶ
  • ನಗರದ ರಸ್ತೆ ಗುಂಡಿಗಳನ್ನು 10 ದಿನದೊಳಗೆ ಮುಚ್ಚುವಂತೆ ಸಿಎಂ ಸಿದ್ದರಾಮಯ್ಯ ಅವರು ಬಿಬಿಎಂಪಿ ಅಧಿಕಾರಿಗಳಿಗೆ ಖಡಕ್ ಸೂಚನೆ ರವಾನಿಸಿದ್ದಾರೆ.
  • ಬಿಬಿಎಂಪಿ ನೂತನ ಆಯುಕ್ತರಾಗಿ ಮಂಜುನಾಥ್ ಪ್ರಸಾದ್ ನೇಮಕ
  • ಬೆಂಗಳೂರಲ್ಲಿ ಕಸ ವಿಂಗಡಣೆ ಕಡ್ಡಾಯಗೊಳಿಸಿ ಹೈಕೋರ್ಟ್ ಆದೇಶ; ಉಲ್ಲಂಘನೆಗೆ ಭಾರೀ ದಂಡ
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited