ಬೆಂಗಳೂರು : ಐ.ಎ.ಎಸ್ ಅಧಿಕಾರಿ ಡಿ.ಕೆ ರವಿ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡುವಂತೆ ಒತ್ತಾಯಿಸಿ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ವಿಧಾನಸಭೆಯಲ್ಲಿ ನಡೆಸುತ್ತಿರುವ ಪ್ರತಿಭಟನೆ ಮಾ.19ರಂದೂ ಮುಂದುವರೆದಿದೆ.
ಪ್ರತಿಪಕ್ಷಗಳ ಗದ್ದಲ ತೀವ್ರಗೊಂಡ ಹಿನ್ನೆಲೆಯಲ್ಲಿ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪವನ್ನು ಮುಂದೂಡಲಾಗಿದೆ.
ಡಿ.ಕೆ ರವಿ ಅವರ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಸೂಚನೆ ನೀಡಿದರೂ ಸಿಎಂ ಸಿದ್ದರಾಮಯ್ಯ ಯಾವುದೇ ಕ್ರಮ ಕೈಗೊಳ್ಳದೇ ಇರುವ ಹಿನ್ನೆಲೆಯಲ್ಲಿ ಬಿಜೆಪಿ ಪ್ರತಿಭಟನೆ ತೀವ್ರಗೊಂಡಿದೆ.
ರವಿ ಸಾವಿನ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಬೇಕೆಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರಿಗೆ ಬಿಜೆಪಿ ಸಂಸದರ ನಿಯೋಗ ಮನವಿ ಸಲ್ಲಿಸಿತ್ತು. ಮನವಿಯನ್ನು ಗಂಭೀರವಾಗಿ ಪರಿಗಣಿಸಿದ್ದ ರಾಜನಾಥ್ ಸಿಂಗ್, ಸಿಬಿಐ ತನಿಖೆಗೆ ಆದೇಶಿಸುವಂತೆ ರಾಜ್ಯಕ್ಕೆ ಸೂಚನೆ ನೀಡಿದ್ದರು. ಆದರೂ ರಾಜ್ಯ ಸರ್ಕಾರ ಕೇಂದ್ರದ ಸೂಚನೆಗೆ ಯಾವುದೇ ಮನ್ನಣೆ ನೀಡಿಲ್ಲ.