Untitled Document
Sign Up | Login    
Dynamic website and Portals
  
March 19, 2015

ಭಾರತದ ಮೇಲೆ ಇಸ್ಲಾಮಿಕ್ ಸ್ಟೇಟ್ ಉಗ್ರರ ಪ್ರಭಾವ ನಗಣ್ಯ: ರಾಜನಾಥ್ ಸಿಂಗ್

ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್

ಜೈಪುರ : 'ಪಾಕಿಸ್ತಾನ', ಭಾರತದ ಮೇಲೆ ನಡೆಸುತ್ತಿರುವ ಪ್ರಾಕ್ಸಿ ಯುದ್ಧವನ್ನು ನಿಲ್ಲಿಸಬೇಕು ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಎಚ್ಚರಿಸಿದ್ದಾರೆ.

ಜೈಪುರದಲ್ಲಿ ನಡೆದ ಅಂತಾರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದ ರಾಜನಾಥ್ ಸಿಂಗ್, ಪಾಕಿಸ್ತಾನ ತಕ್ಷಣವೇ ಭಾರತದ ವಿರುದ್ಧ ನಡೆಸುತ್ತಿರುವ ಪ್ರಾಕ್ಸಿ ಯುದ್ಧವನ್ನು ನಿಲ್ಲಿಸಬೇಕು. ಈ ಮಾತನ್ನು ಪಾಕ್ ಹಿತದೃಷ್ಟಿಯಿಂದಲೇ ಹೇಳುತ್ತಿರುವುದಾಗಿ ತಿಳಿಸಿದ್ದಾರೆ. ಭಯೋತ್ಪಾದಕರನ್ನು ಮುಂದಿಟ್ಟುಕೊಂದು ಪಾಕಿಸ್ತಾನ ಪರೋಕ್ಷ ಯುದ್ಧ ನಡೆಸುತ್ತಿದೆ ಎಂದು ರಾಜನಾಥ್ ಸಿಂಗ್ ಆರೋಪಿಸಿದ್ದಾರೆ.

ಇದೇ ವೇಳೆ ಭಾರತದಲ್ಲಿ ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆ ಸಕ್ರಿಯವಾಗಿರುವ ಬಗ್ಗೆ ಪ್ರತಿಕ್ರಿಯಿಸಿರುವ ರಾಜನಾಥ್ ಸಿಂಗ್, ಭಾರತದ ಯುವಜನತೆ ಮೇಲೆ ಐ.ಎಸ್ ಯಾವುದೇ ಪರಿಣಾಮ ಬೀರಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಕೆಲವರು ಐ.ಎಸ್.ಐ.ಎಸ್ ಸಂಘಟನೆ ಸೇರಿದ್ದರೂ ಪೋಷಕರ ಮನವೊಲಿಕೆಯ ಪರಿಣಾಮ ಅವರು ವಾಪಸ್ ಭಾರತಕ್ಕೆ ಆಗಮಿಸಿದ್ದಾರೆ ಎಂದು ರಾಜನಾಥ್ ಸಿಂಗ್ ತಿಳಿಸಿದ್ದಾರೆ. ಭಾರತದ ಮುಸ್ಲಿಮರನ್ನು ದೇಶಭಕ್ತರೆಂದು ಹೇಳಿರುವ ರಾಜನಾಥ್ ಸಿಂಗ್, ಮುಸ್ಲಿಮ್ ಮೂಲಭೂತವಾದ ಪ್ರಭಾವಕ್ಕೆ ಅವರೆಂದೂ ಒಳಗಾಗುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇಂಡಿಯನ್ ಫೌಂಡೇಷನ್ ಹಾಗೂ ಸರ್ದಾರ್ ಪಟೇಲ್ ವಿಶ್ವವಿದ್ಯಾನಿಲಯದ ವತಿಯಿಂದ ಭಯೋತ್ಪಾದನಾ ನಿಗ್ರಹ ಸಮ್ಮೇಳನವನ್ನು ಆಯೋಜಿಸಲಾಗಿತ್ತು. ಈ ಸಮ್ಮೇಳನ ಇಂದಿನಿಂದ ಮೂರು ದಿನ ನಡೆಯಲಿದ್ದು, ಭಯೋತ್ಪಾದನಾ ನಿಗ್ರಹ ತಜ್ನರು ಭಾಗವಹಿಸಲಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited