Untitled Document
Sign Up | Login    
Dynamic website and Portals
  
March 23, 2015

ಯೋಗ, ಸೂರ್ಯನಮಸ್ಕಾರ ಇಸ್ಲಾಂ ವಿರೋಧಿ ಎಂದ ಮುಸ್ಲಿಂ ವೈಯಕ್ತಿಕ ಕಾನೂನು ಸಮಿತಿ

ಜೈಪುರ : ಶಾಲೆಗಳಲ್ಲಿ ಯೋಗ ಮತ್ತು ಸೂರ್ಯನಮಸ್ಕಾರವನ್ನು ಕಡ್ಡಾಯ ಮಾಡುತ್ತಿರುವ ರಾಜಸ್ಥಾನ ಸರ್ಕಾರದ ನಡೆಯನ್ನು ತೀವ್ರವಾಗಿ ವಿರೋಧಿಸಿರುವ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಪೀಠ, ಆದೇಶವನ್ನು ಕೂಡಲೆ ಹಿಂತೆಗೆದುಕೊಳ್ಳುವಂತೆ ಸರ್ಕಾರಕ್ಕೆ ಆಗ್ರಹಿಸಿದೆ.

"ಇದು ಇಸ್ಲಾಂ ವಿರೋಧಿ ಮತ್ತು ಸರ್ಕಾರ ತನ್ನ ನಿರ್ಧಾರವನ್ನು ಕೂಡಲೆ ಹಿಂದೆಗೆದುಕೊಳ್ಳಬೇಕು. ಇಸ್ಲಾಂ ಈ ಚಟುವಟಿಕೆಗಳಿಗೆ ಅವಕಾಶ ನೀಡುವುದಿಲ್ಲ. ಇವುಗಳನ್ನು ಮುಸ್ಲಿಮರ ಮೇಲೆ ಹೇರುವುದು ತಪ್ಪು" ಎಂದು ಸಮಿತಿಯ ಸಹ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹೀಮ್ ಖುರೇಶಿ, ಸಮಿತಿಯ 24ನೆ ಸಭೆಯ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದ್ದಾರೆ.

"ದೇಶದ ಶಾಂತಿ ಮತ್ತು ಅಭಿವೃದ್ಧಿಗೆ ಆಂತರಿಕ ಭದ್ರತೆ ಮುಖ್ಯ, ಅದಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಧಾರ್ಮಿಕ ಸ್ವಾತಂತ್ರ್ಯವನ್ನು ಹಾಳುಗೆಡುವ ನಿರ್ಧಾರಗಳ ಬದಲು ಆ ನಿಟ್ಟಿನಲ್ಲಿ ಚಿಂತನೆ ನಡೆಸಬೇಕು" ಎಂದು ಅವರು ತಿಳಿಸಿದ್ದಾರೆ.

"ಧಾರ್ಮಿಕ ಗ್ರಂಥದ" ಅಧ್ಯಾಯಗಳನ್ನು ಶಾಲಾ ಪಠ್ಯದಲ್ಲಿ ಸೇರಿಸುವುದನ್ನು ಕೂಡ ಖುರೇಶಿ ವಿರೋಧಿಸಿದ್ದಾರೆ. "ಅಲ್ಪಸಂಖ್ಯಾತರು ಯಾವುದೇ ತೊಂದರೆ ಇಲ್ಲದೆ ತಮ್ಮ ಧರ್ಮವನ್ನು ಆಚರಿಸಲು ಅನುವಾಗುವಂತೆ ಅವರ ಮನದಲ್ಲಿ ಆತ್ಮಸ್ಥೈರ್ಯವನ್ನು ಮೂಡಿಸುವ ಕ್ರಮಗಳನ್ನು ಸರ್ಕಾರ ತೆಗೆದುಕೊಳ್ಳಬೇಕು ಆದರೆ ನರೇಂದ್ರ ಮೋದಿ ಅವರು ಪ್ರಧಾನಮಂತ್ರಿಯಾದ ಮೇಲೆ ಹಿಂದುತ್ವ ಸಂಘಟನೆಗಳು ಅಲ್ಪಸಂಖ್ಯಾತರ ವಿರುದ್ಧ ತಮ್ಮ ಕಾರ್ಯಸೂಚಿಯನ್ನು ಹೇರುತ್ತಿದ್ದಾರೆ" ಎಂದು ಅವರು ತಿಳಿಸಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : General

ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
  • ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
  • ದೇಶಿ ನಿರ್ಮಿತ ಮೂರನೇ ಜಲಾಂತರ್ಗಾಮಿ ನೌಕೆ ಪ್ರಾಜೆಕ್ಟ್‌ 28ರ ಅಡಿಯಲ್ಲಿ ನಿರ್ಮಾಣಗೊಂಡ ಐಎನ್‌ಎಸ್‌ ಕಿಲ್ತಾನ್‌ ನೌಕೆಯನ್ನು ವಿಶಾಖಪಟ್ಟಣದ ನೌಕಾ ನೆಲೆಯಲ್ಲಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಲೋಕಾರ್ಪಣೆ ಮಾಡಿದರು.
  • ಆರುಷಿ ಹತ್ಯೆ ಪ್ರಕರಣ: ತಲ್ವಾರ್ ದಂಪತಿಗಳು ಖುಲಾಸೆ;ಅಲಹಾಬಾದ್ ಹೈಕೋರ್ಟ್ ತೀರ್ಪು
  • ಅ.12ರ ಮಧ್ಯ ರಾತ್ರಿಯಿಂದ ಪೆಟ್ರೋಲ್ ಬಂಕ್ ಬಂದ್
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited