Untitled Document
Sign Up | Login    
Dynamic website and Portals
  
March 23, 2015

ನವದೆಹಲಿಯಲ್ಲಿ ಪಾಕಿಸ್ತಾನ ದಿನಾಚರಣೆ ರದ್ದುಗೊಳಿಸಲು ಕೇಂದ್ರದ ಮೇಲೆ ಹೆಚ್ಚಿದ ಒತ್ತಡ

ನವದೆಹಲಿ : ನವದೆಹಲಿಯಲ್ಲಿ ಪಾಕಿಸ್ತಾನ ದಿನಾಚರಣೆ ಆಚರಿಸುವುದಕ್ಕೆ ಪಕ್ಷಾತೀತವಾಗಿ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಪಾಕಿಸ್ತಾನ ಹೈಕಮಿಷನರ್ ಇಂದ ಆಹ್ವಾನ ಪಡೆದಿರುವ ಕೇಂದ್ರ ಸರ್ಕಾರದ ಸಚಿವರು ಪಾಕಿಸ್ತಾನ ದಿನಾಚರಣೆಯಲ್ಲಿ ಪಾಲ್ಗೊಳ್ಳದೇ ಇರಲು ನಿರ್ಧರಿಸಿದ್ದಾರೆ.

ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ವಿದೇಶಾಂಗ ಕಾರ್ಯದರ್ಶಿ ಜೈಶಂಕರ್, ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಬಹುತೇಕ ಕೇಂದ್ರ ಸಚಿವರು ಕಾರ್ಯಕ್ರಮಕ್ಕೆ ಹೋಗದೇ ಇರಲು ನಿರ್ಧರಿಸಿದ್ದಾರೆ. ಆದರೆ ಪ್ರತ್ಯೇಕತಾವಾದಿಗಳಾದ ಹುರಿಯತ್ ಕಾನ್ಫರೆನ್ಸ್ ನ ಮುಖಂಡ ಸಯ್ಯದ್ ಶಾ ಗಿಲಾನಿ, ಮಸ್ರತ್ ಆಲಂ ಸೇರಿದಂತೆ ಹಲವರು ಪಾಕಿಸ್ತಾನ ದಿನಾಚರಣೆಯಲ್ಲಿ ಪಾಲ್ಗೊಳ್ಳಲು ತುದಿಗಾಲಿನಲ್ಲಿ ನಿಂತಿದ್ದಾರೆ.

ಈ ಬೆಳವಣಿಗೆಗೆ ಕಾಂಗ್ರೆಸ್, ಆಮ್ ಆದ್ಮಿ ಪಕ್ಷ, ಜೆಡಿಯು ಸೇರಿದಂತೆ ಪಕ್ಷಾತೀತವಾಗಿ ಖಂಡನೆ ವ್ಯಕ್ತವಾಗಿದ್ದು, ಕಾಶ್ಮೀರ ಪ್ರತ್ಯೇಕತಾವಾದಿಗಳು ಭಾಗವಹಿಸಲಿರುವ ಪಾಕಿಸ್ತಾನ ದಿನಾಚರಣೆ ಕಾರ್ಯಕ್ರಮವನ್ನೇ ರದ್ದುಗೊಳಿಸಬೇಕು ಎಂಬ ಒತ್ತಾಯ ಹೆಚ್ಚಾಗುತ್ತಿದೆ.

ಪ್ರಾರಂಭದಲ್ಲಿ ವಿದೇಶಾಂಗ ಇಲಾಖೆ ರಾಜ್ಯ ಸಚಿವ ವಿ.ಕೆ ಸಿಂಗ್ ಪಾಕಿಸ್ತಾನ ದಿನಾಚರಣೆಯಲ್ಲಿ ಭಾಗವಹಿಸಲಿದ್ದಾರೆ ಎಂಬ ವದಂತಿ ಹಬ್ಬಿತ್ತು. ಆದರೆ ಸ್ವತಃ ವಿ.ಕೆ ಸಿಂಗ್ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited