Untitled Document
Sign Up | Login    
Dynamic website and Portals
  
March 25, 2015

ಮಾ.27ರಂದು ಅಟಲ್ ಬಿಹಾರಿ ವಾಜಪೇಯಿಗೆ ಭಾರತ ರತ್ನ ಪ್ರಶಸ್ತಿ ಪ್ರದಾನ

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ

ನವದೆಹಲಿ : 'ರಾಷ್ಟ್ರಪತಿ' ಪ್ರಣಬ್ ಮುಖರ್ಜಿ ಅವರು, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಮಾ.27ರಂದು, ಮದನ್ ಮೋಹನ್ ಮಾಳವೀಯ ಅವರಿಗೆ ಮಾ.30ರಂದು ಭಾರತ ರತ್ನ ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ.

ಅನಾರೋಗ್ಯದ ಕಾರಣ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ರಾಷ್ಟ್ರಪತಿ ಭವನಕ್ಕೆ ತೆರಳು ಸಾಧ್ಯವಿಲ್ಲದ ಕಾರಣ, ವಾಜಪೇಯಿ ನಿವಾಸಕ್ಕೆ ರಾಷ್ಟ್ರಪತಿಗಳೇ ಭೇಟಿ ನೀಡಲಿದ್ದು, ದೇಶದ ಅತ್ಯುನ್ನತ ಪ್ರಶಸ್ತಿಯಾಗಿರುವ ಭಾರತ ರತ್ನವನ್ನು ಪ್ರದಾನ ಮಾಡಲಿದ್ದಾರೆ. ಮದನ್ ಮೋಹನ್ ಮಾಳವೀಯ ಪರವಾಗಿ ಅವರ ಕುಟುಂಬ ಸದಸ್ಯರು ಭಾರತ ರತ್ನವನ್ನು ಸ್ವೀಕರಿಸಲು ರಾಷ್ಟ್ರಪತಿ ಭವನಕ್ಕೆ ತೆರಳಲಿದ್ದಾರೆ ಎಂದು ಹೇಳಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ತಮ್ಮ ಎಲ್ಲಾ ಸಂಪುಟ ಸಹೋದ್ಯೋಗಿಗಳೊಂದಿಗೆ ಅಟಲ್ ಬಿಹಾರಿ ವಾಜಪೇಯಿ ಅವರ ನಿವಾಸಕ್ಕೆ ತೆರಳಲಿದ್ದು, ಭಾರತ ರತ್ನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಮಾ.27ರ ಸಂಜೆ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಲಾಗುತ್ತದೆ.

2014ರ ಡಿ.24ರಂದು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಹಾಗೂ ಮದನ್ ಮೋಹನ್ ಮಾಳವೀಯ ಅವರಿಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಭಾರತ ರತ್ನ ಪ್ರಶಸ್ತಿ ಘೋಷಿಸಿದ್ದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited