ನವದೆಹಲಿ : ಆಮ್ ಆದ್ಮಿ ಪಕ್ಷದೊಳಗಿನ ರಾಜಕೀಯ ಜಂಗೀಕುಸ್ತಿ ಮುಂದುವರಿದಿರುವ ಬೆನ್ನಲ್ಲೇ ಸಾಮಾಜಿಕ ಹೋರಾಟಗಾರ್ತಿ ಮೇಧಾ ಪಾಟ್ಕರ್ ಆಮ್ ಆದ್ಮಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.
ಮಾ.28ರಂದು ನಡೆದ ನಾಟಕೀಯ ಬೆಳವಣಿಗೆಯಲ್ಲಿ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಪಕ್ಷದ ಯೋಗೇಂದ್ರ ಯಾದವ್ ಹಾಗೂ ಪ್ರಶಾಂತ್ ಭೂಷಣ್ ಅವರನ್ನು ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯತ್ವದಿಂದ ಉಚ್ಚಾಟಿಸಲಾಗಿತ್ತು.
ಈ ಬೆಳವಣಿಗೆಯ ನಡುವೆಯೇ ಆಮ್ ಆದ್ಮಿ ಪಕ್ಷದ ಮೇಲೆ ತುಂಬಾ ವಿಶ್ವಾಸವಿಟ್ಟಿದ್ದ ಮೇಧಾ ಪಾಟ್ಕರ್ ಇತ್ತೀಚೆಗಿನ ಬೆಳವಣಿಗೆಯಿಂದ ರೋಸಿ ಹೋಗಿ ಎಎಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವುದಾಗಿ ಟ್ವೀಟ್ ಮೂಲಕ ತಿಳಿಸಿದ್ದಾರೆ.