Untitled Document
Sign Up | Login    
Dynamic website and Portals
  
March 30, 2015

ಇಂದಿನಿಂದ ಎಸ್‌.ಎಸ್‌.ಎಲ್‌.ಸಿ ಪರೀಕ್ಷೆ ಆರಂಭ

ಬೆಂಗಳೂರು : ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಸ್‌.ಎಸ್‌.ಎಲ್‌.ಸಿ ಪರೀಕ್ಷೆ ಸೋಮವಾರ ಆರಂಭವಾಗಿದೆ.

ಪ್ರಸಕ್ತ ಸಾಲಿಗೆ 34 ಶೈಕ್ಷಣಿಕ ಜಿಲ್ಲೆಗಳಲ್ಲಿ 3,038 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ರಾಜ್ಯದ 13,693 ಪ್ರೌಢ ಶಾಲೆಗಳ 4,52,634 ಬಾಲಕರು ಮತ್ತು 4,03,804 ಬಾಲಕಿಯರು ಸೇರಿ ಒಟ್ಟು 8,56,638 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ.

ಪರೀಕ್ಷಾ ಕೇಂದ್ರಗಳ ಪೈಕಿ 148 ಸೂಕ್ಷ್ಮ ಮತ್ತು 50 ಅತಿ ಸೂಕ್ಷ್ಮ ಸೇರಿದಂತೆ ಒಟ್ಟು 829 ಕೇಂದ್ರಗಳೆಂದು ಗುರುತಿಸಲಾಗಿದ್ದು, ಇದೇ ಮೊದಲ ಬಾರಿಗೆ ಕೆಮರಾ ಕಣ್ಗಾವಲಿನಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ.

ಕಳೆದ ಒಂದೆರಡು ವರ್ಷಗಳಲ್ಲಿ ಸಾಮೂಹಿಕ ನಕಲು, ನಕಲು ಹೆಚ್ಚಾಗಿ ಕಂಡುಬಂದ 820 ಕೇಂದ್ರಗಳನ್ನು ಶಿಕ್ಷಣ ಇಲಾಖೆ ಗುರುತಿಸಿ, ಅಲ್ಲಿ ಪ್ರತಿ ಕೊಠಡಿಯಲ್ಲೂ ತಲಾ ಒಂದು ಸಿಸಿಟಿವಿ ಅಳವಡಿಕೆ ಮಾಡಿದೆ. ಹಾಗಾಗಿ, ಆ ಕೇಂದ್ರಗಳಲ್ಲಿ ಪರೀಕ್ಷೆ ಬರೆಯುವ, ಆ ಕೇಂದ್ರದ ಮೇಲ್ವಿಚಾರಕರ ಮೇಲೆ ಕೆಮರಾ ಕಣ್ಣು ನೆಟ್ಟಿರುತ್ತದೆ.

ಈ ಬಾರಿ ಪರೀಕ್ಷೆ ಬರೆಯುವ 8,56,638 ವಿದ್ಯಾರ್ಥಿಗಳಲ್ಲಿ 16,337 ಖಾಸಗಿ ಹಾಗೂ 32,607 ಪುನರಾವರ್ತಿತ ವಿದ್ಯಾರ್ಥಿಗಳೂ ಸೇರಿದ್ದಾರೆ. ಏ.13ರವರೆಗೆ ಪರೀಕ್ಷೆ ನಡೆಯಲಿದೆ. ಮೊದಲ ದಿನವಾದ ಸೋಮವಾರ ಬೆಳಗ್ಗೆ 9.30ಕ್ಕೆ ಕನ್ನಡ ಸೇರಿದಂತೆ ಎಲ್ಲ ಪ್ರಥಮ ಭಾಷಾ ಪರೀಕ್ಷೆ ನಡೆಯುತ್ತಿದೆ.

ಇಲಾಖೆಯ ಉಪನಿರ್ದೇಶಕರು, ಸಹ ನಿರ್ದೇಶಕರು ಹಾಗೂ ಉಪನಿರ್ದೇಶಕರ ವೃಂದದ ಅಧಿಕಾರಿಗಳನ್ನು ಜಿಲ್ಲಾ ವೀಕ್ಷಕರನ್ನಾಗಿ ಹಾಗೂ ಪ್ರತಿ ತಾಲೂಕಿಗೆ ಇಬ್ಬರಂತೆ ಡಯಟ್‌ನ ಉಪನ್ಯಾಸಕರನ್ನು ವಿಚಕ್ಷಣಾ ಜಾಗೃತದಳಕ್ಕೆ ನೇಮಿಸಲಾಗಿದೆ.

ಜಿಲ್ಲೆಯಲ್ಲಿ ಉಪ ನಿರ್ದೇಶಕರು ಶಿಕ್ಷಣಾಧಿಕಾರಿಗಳ ನೇತೃತ್ವದಲ್ಲಿ ವಿಚಕ್ಷಣಾ ಜಾಗೃತ ದಳದ ತಂಡಗಳನ್ನು ರಚಿಸಲಾಗಿದೆ. ಆಯಾ ಜಿಲ್ಲಾ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಲಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ತಿಳಿಸಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited