Untitled Document
Sign Up | Login    
Dynamic website and Portals
  
March 31, 2015

ಪಂಚಾಯ್ತಿ ಚುನಾವಣೆಗೆ ಮತದಾನ ಕಡ್ಡಾಯ ಸಾಧ್ಯತೆ: ಮಸೂದೆ ಮಂಡನೆ

ಬೆಂಗಳೂರು : ಪಂಚಾಯತ್‌ ವ್ಯವಸ್ಥೆಯ ಗ್ರಾಮ ಪಂಚಾಯತ್‌, ತಾಲೂಕು ಪಂಚಾಯತ್‌ ಮತ್ತು ಜಿಲ್ಲಾ ಪಂಚಾಯತ್‌ ಚುನಾವಣೆಗಳಲ್ಲಿ ಮತದಾನ ಕಡ್ಡಾಯಗೊಳಿಸುವ ಕುರಿತ ವಿಧೇಯಕವೊಂದನ್ನು ರಾಜ್ಯ ಸರ್ಕಾರ ಮಂಡಿಸಿದೆ.

ಅಲ್ಲದೆ, ಗ್ರಾಮ ಪಂಚಾಯತ್‌, ತಾಲೂಕು ಪಂಚಾಯತ್‌ ಹಾಗೂ ಜಿಲ್ಲಾ ಪಂಚಾಯತ್‌ ಗಳ ಅಧ್ಯಕ್ಷ-ಉಪಾಧ್ಯಕ್ಷರ ಅವಧಿಯನ್ನು ಐದು ವರ್ಷಗಳಿಗೆ ಹೆಚ್ಚಿಸುವ ಅವಕಾಶವನ್ನೂ ಈ ವಿಧೇಯಕದಲ್ಲಿ ಕಲ್ಪಿಸಲಾಗಿದೆ.

ಈ ಅಂಶಗಳನ್ನು ಒಳಗೊಂಡ ’ಕರ್ನಾಟಕ ಪಂಚಾಯತ್‌ ರಾಜ್‌ (ತಿದ್ದುಪಡಿ) ವಿಧೇಯಕ, 2015' ಅನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಖಾತೆ ಸಚಿವ ಹೆಚ್‌.ಕೆ.ಪಾಟೀಲ್‌ ವಿಧಾನಸಭೆಯಲ್ಲಿ ಮಂಡಿಸಿದರು. ಸಮಯದ ಅಭಾವದ ಹಿನ್ನೆಲೆಯಲ್ಲಿ ಈ ವಿಧೇಯಕ ಕುರಿತ ಚರ್ಚೆ ನಡೆಯಲಿಲ್ಲ. ಮಂಗಳವಾರ ಈ ಕುರಿತು ವಿಸ್ತೃತ ಚರ್ಚೆ ನಡೆದ ನಂತರ ಅನುಮೋದನೆ ಪಡೆಯುವ ಸಾಧ್ಯತೆಯಿದೆ.

ಆಡಳಿತಾರೂಢ ಕಾಂಗ್ರೆಸ್ಸಿನ ಹಿರಿಯ ಶಾಸಕ ಕೆ.ಆರ್‌.ರಮೇಶ್‌ ಕುಮಾರ್‌ ಅವರ ನೇತೃತ್ವದ ಸಮಿತಿಯ ಶಿಫಾರಸುಗಳ ಆಧಾರದ ಮೇಲೆ ಶನಿವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಣಯ ಕೈಗೊಳ್ಳಲಾಗಿತ್ತು.

ಮತದಾನ ಮಾಡುವುದನ್ನು ಕಡ್ಡಾಯಗೊಳಿಸಲು ನಿರ್ಧರಿಸಲಾಗಿದ್ದು, ಇದು ವಿಧಾನಮಂಡಲದ ಉಭಯ ಸದನಗಳಲ್ಲಿ ಅಂಗೀಕಾರಗೊಂಡಲ್ಲಿ ಮುಂಬರುವ ಮೇ ತಿಂಗಳಲ್ಲಿ ನಡೆಯಬೇಕಿರುವ ಗ್ರಾಮ ಪಂಚಾಯತ್‌ ಚುನಾವಣೆಯಲ್ಲಿ ಜಾರಿಗೊಳಿಸಲಾಗುವುದೇ ಎಂಬುದರ ಬಗ್ಗೆ ಇನ್ನೂ ಸ್ಪಷ್ಟ ಮಾಹಿತಿ ಹೊರಬಿದ್ದಿಲ್ಲ. ಆದರೆ, ಕಣದಲ್ಲಿರುವ ಯಾವುದೇ ಅಭ್ಯರ್ಥಿಗೂ ಮತದಾನ ಮಾಡಲು ಇಷ್ಟವಿಲ್ಲದಿದ್ದರೆ ’ನೋಟಾ' ಪದ್ಧತಿ ಅಳವಡಿಸುವ ಬಗ್ಗೆಯೂ ಒಲವು ವ್ಯಕ್ತಪಡಿಸಲಾಗಿದೆ. ಇದಕ್ಕೆ ಚುನಾವಣಾ ಆಯುಕ್ತರು ಅವಕಾಶ ಕಲ್ಪಿಸಿದಲ್ಲಿ ಯಾವುದೇ ಅಭ್ಯರ್ಥಿಯ ಪರ ಮತ ಚಲಾಯಿಸದೆ ’ನೋಟಾ' ಚಲಾಯಿಸಬಹುದು ಎಂದು ಪ್ರಸ್ತಾಪಿಸಲಾಗಿದೆ.

ಮೂರು ಹಂತದ ಪಂಚಾಯತ್‌ ವ್ಯವಸ್ಥೆಯಲ್ಲೂ ಅಧ್ಯಕ್ಷ-ಉಪಾಧ್ಯಕ್ಷರ ಅವಧಿಯನ್ನು ಐದು ವರ್ಷಗಳಿಗೆ ಹೆಚ್ಚಿಸಲಾಗುತ್ತದೆ. ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ನಡೆದ ದಿನದಿಂದ ಐದು ವರ್ಷಗಳವರೆಗೆ ಅಥವಾ ಸದಸ್ಯತ್ವ ಅವಧಿ ಮುಗಿಯುವವರೆಗೆ ಅನ್ವಯವಾಗುತ್ತದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited