ಪಾಟ್ನಾ : 'ಬಿಹಾರ'ದಲ್ಲಿ ಬಾಂಬ್ ಸ್ಫೋಟ ಸಂಭವಿಸಿದೆ. ರಾಜ್ಯದ ಬಹದೂರ್ ಪುರದಲ್ಲಿ ಕಡಿಮೆ ತೀವ್ರತೆಯ ಕ್ರೇನ್ ಬಾಂಬ್ ಸ್ಫೋಟಗೊಂಡಿದ್ದು ಜನತೆಯಲ್ಲಿ ಆತಂಕ ಮೂಡಿಸಿದೆ.
ಫ್ಲಾಟ್ ಒಂದರಲ್ಲಿ ಬಾಂಬ್ ತಯಾರಿಸುತ್ತಿರುವಾಗಲೇ ಸ್ಫೋಟಗೊಂಡಿದೆ ಎಂದು ಶಂಕಿಸಲಾಗಿದೆ. ಘಟನೆಯಲ್ಲಿ ಯಾವುದೇ ಅನಾಹುತ ಸಂಭವಿಸಿಲ್ಲ. ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಪೊಲೀಸ್ ಅಧಿಕಾರಿಗಳು ಉಳಿದ 2 ಜೀವಂತ ಬಾಂಬ್ ಗಳನ್ನು ನಿಷ್ಕ್ರಿಯಗೊಳಿಸಿದ್ದಾರೆ.
ಬಾಂಬ್ ಸ್ಫೋಟಗೊಂಡಿರುವುದರ ಪರಿಣಾಮ ಸ್ಥಳೀಯ ಜನತೆ ತೀವ್ರ ಆತಂಕಕ್ಕೊಳಗಾಗಿದ್ದಾರೆ. ಆಗಮ್ಕೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಬಾಂಬ್ ಸ್ಫೋಟಗೊಂಡ ಫ್ಲಾಟ್ ನ್ನು ಕೆಲ ಯುವಕರು ಅಕ್ರಮವಾಗಿ ಸ್ವಾಧೀನಪಡಿಸಿಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.