Untitled Document
Sign Up | Login    
Dynamic website and Portals
  
April 2, 2015

ಫರ್ವೇಜ್ ಮುಷರಫ್ ವಿರುದ್ಧ ಬಂಧವ ವಾರೆಂಟ್ ಜಾರಿ

ಇಸ್ಲಾಮಾಬಾದ್ : ಲಾಲ್ ಮಸೀದಿ ಸೇನಾ ಕಾರ್ಯಾಚರಣೆ ಸಂದರ್ಭದಲ್ಲಿ ನಡೆದ ಧರ್ಮಗುರು ಮತ್ತು ಧಾರ್ಮಿಕ ವಿದ್ಯಾ ಕೇಂದ್ರದ ವಿದ್ಯಾರ್ಥಿಗಳ ಹತ್ಯೆಗೆ ಸಂಬಂಧಿಸಿದಂತೆ ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಅವರಿಗೆ ಇಸ್ಲಾಮಾಬಾದ್ ಸೆಷನ್ಸ್ ನ್ಯಾಯಾಲಯವು ಜಾಮೀನು ರಹಿತ ಬಂಧನ ವಾರೆಂಟ್ ಜಾರಿ ಮಾಡಿದೆ.

ಪ್ರಕರಣ ಕುರಿತಂತೆ ವಿಚಾರಣೆ ನಡೆಸಿದ ನ್ಯಾಯಾಲಯ ವಿಚಾರಣಾ ಹಾಜರಾತಿ ವಿನಾಯಿತಿ ಕುರಿತಂತೆ ಮುಷರಫ್ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ್ದು, ಜಾಮೀನು ರಹಿತ ಬಂಧನ ವಾರೆಂಟ್ ಜಾರಿ ಮಾಡಿದೆ. ಅಲ್ಲದೆ, ವಿಚಾರಣೆಯನ್ನು ಏಪ್ರಿಲ್ 27ಕ್ಕೆ ಮುಂದೂಡಿದೆ.

ಲಾಲ್ ಮಸೀದಿ ಸೇನಾ ಕಾರ್ಯಾಚರಣೆ ಸಂದರ್ಭದಲ್ಲಿ ನಡೆದ ಧರ್ಮಗುರು ಅಬ್ದುಲ್ ರಶೀದ್, ಅವರ ತಾಯಿ ಮತ್ತು ಧಾರ್ಮಿಕ ವಿದ್ಯಾ ಕೇಂದ್ರದ ವಿದ್ಯಾರ್ಥಿಗಳ ಹತ್ಯೆ ಪ್ರಕರಣದಲ್ಲಿ ಪರ್ವೇಜ್ ಮುಷರಫ್ ಅವರ ಹೆಸರು ಕೇಳಿಬಂದಿತ್ತು. ಇದರಂತೆ ಪೊಲೀಸರು ಪರ್ವೇಜ್ ಮುಷರಫ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದರು.

ಆದರೆ ಆರೋಗ್ಯ ಹಾಗೂ ಭದ್ರತೆಗಳ ನೆಪ ಹೂಡತ್ತಲೇ ನ್ಯಾಯಾಲಯದಿಂದ ವಿನಾಯಿತಿ ಪಡೆದು ವಿಚಾರಣೆಗೆ ಪರ್ವೇಜ್ ಮುಷರಫ್ ಹಾಜರಾಗುತ್ತಿರಲಿಲ್ಲ. ಹಾಗಾಗಿ ಪರ್ವೇಜ್ ಮುಷರಫ್ ಅವರ ಈ ಪ್ರತಿಕ್ರಿಯೆಗೆ ಅಸಮಾಧಾನ ವ್ಯಕ್ತಪಡಿಸಿರುವ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಮುಷರಫ್ ಅವರಿಗೆ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited