Untitled Document
Sign Up | Login    
Dynamic website and Portals
  
April 2, 2015

ಸಂಸ್ಕಾರವಿಲ್ಲದ ಭಾಷೆ ಉಪಯೋಗಿಸುವವರನ್ನು ಬಿಜೆಪಿ ಗೌರವಿಸುತ್ತದೆ: ನಿತೀಶ್ ಕುಮಾರ್

ನಿತೀಶ್ ಕುಮಾರ್ ನಿತೀಶ್ ಕುಮಾರ್

ಪಾಟ್ನಾ : ಸಂಸ್ಕಾರವಿಲ್ಲದ ಭಾಷೆ ಉಪಯೋಗಿಸುವವರನ್ನು ಬಿಜೆಪಿ ಗೌರವಿಸುತ್ತಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಬಿಜೆಪಿ ಸಚಿವ ಗಿರಿರಾಜ್ ಸಿಂಗ್ ಅವರ ಹೇಳಿಕೆಗಳನ್ನು ವಿರೋಧಿಸಿರುವ ನಿತೀಶ್ ಕುಮಾರ್ ಬಿಜೆಪಿ ಸಂಸ್ಕಾರವಿಲ್ಲದ ಭಾಷೆ ಉಪಯೋಗಿಸುವವರನ್ನು ಗೌರವಿಸುತ್ತದೆ ಎಂದು ಹೇಳಿದ್ದಾರೆ.

ಸೋನಿಯಾ ಗಾಂಧಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಗಿರಿರಾಜ್ ಸಿಂಗ್ ವಿರುದ್ಧ ಬಿಜೆಪಿ ಕ್ರಮ ಕೈಗೊಳ್ಳದೇ ಇರುವುದನ್ನು ನಿತೀಶ್ ಕುಮಾರ್ ಖಂಡಿಸಿದ್ದು, ಸಂಸ್ಕಾರವಿಲ್ಲದ ಭಾಷೆಯನ್ನು ಬಳಸುವವರನ್ನು ಬಿಜೆಪಿ ಗೌರವಿಸುತ್ತದೆ ಎಂಬುದು ಈ ಮೂಲಕ ಸಾಬೀತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ತನ್ನ ಸಂಸದರಿಗೆ ಯಾವ ರೀತಿಯ ತರಬೇತಿ ನೀಡಿದೆ ಎಂಬುದು ಗಿರಿರಾಜ್ ಸಿಂಗ್ ಅವರು ನೀಡಿರುವ ಹೇಳಿಕೆಯಿಂದ ಸ್ಪಷ್ಟವಾಗುತ್ತದೆ ಎಂದು ನಿತೀಶ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸೋನಿಯಾ ಗಾಂಧಿ ಅವರು ಬೆಳ್ಳಗಿರದಿದ್ದರೆ ಕಾಂಗ್ರೆಸ್‌ ಪಕ್ಷ ಅವರ ನಾಯಕತ್ವವನ್ನು ಒಪ್ಪಿಕೊಳ್ಳುತ್ತಿತ್ತೆ' ಎಂದು ಕೇಳುವ ಮೂಲಕ ಸೋನಿಯಾ ಗಾಂಧಿ ಬಗ್ಗೆ ವರ್ಣಭೇದ ಹೇಳಿಕೆ ನೀಡಿ ಕೇಂದ್ರದ ಸೂಕ್ಷ್ಮ, ಸಣ್ಣ ಹಾಗೂ ಮಧ್ಯಮ ಉದ್ದಿಮೆಗಳ ಖಾತೆ ರಾಜ್ಯ ಸಚಿವ ಗಿರಿರಾಜ್‌ ಸಿಂಗ್‌ ವಿವಾದಕ್ಕೆ ಸಿಲುಕಿದ್ದರು. ಈ ಹಿನ್ನೆಲೆಯಲ್ಲಿ ನಿತೀಶ್ ಕುಮಾರ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited