Untitled Document
Sign Up | Login    
Dynamic website and Portals
  
April 4, 2015

ಕೇಂದ್ರವನ್ನು ಅಸ್ಥಿರಗೊಳಿಸಲು ಕಾಂಗ್ರೆಸ್ ಯತ್ನ: ರಾಜನಾಥ್ ಸಿಂಗ್

ರಾಜನಾಥ್ ಸಿಂಗ್ ರಾಜನಾಥ್ ಸಿಂಗ್

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಕಾಂಗ್ರೆಸ್ ಯತ್ನಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಆರೊಪ ಮಾಡಿದ್ದಾರೆ.

ಬೆಂಗಳೂರಿನಲ್ಲಿ ನಡೆಯುತ್ತಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಕೆಲಸಗಳು ಜನರಿಗೆ ತಲುಪುತ್ತಿವೆ. ಕಾಂಗ್ರೆಸ್ ಟೀಕೆಗೆ ನಾವು ತಲೆಕೆಡಿಸಿಕೊಳ್ಳಬೇಕಿಲ್ಲ ಎಂದರು.

ಕಾಂಗ್ರೆಸ್ ನಾಯಕರು ಕೇಂದ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿದ್ದಾರೆ. ಆದರೆ ಕೇಂದ್ರ ಸರ್ಕಾರಕ್ಕೆ ಜನಬೆಂಬಲವಿದೆ. ಕಾಂಗ್ರೆಸ್ ನ ಇಂಥಹ ಯತ್ನಕ್ಕೆ ಯಶಸ್ಸು ಸಿಗುವುದಿಲ್ಲ ಎಂದು ವಾಗ್ದಾಳಿ ನಡೆಸಿದರು.


ಸರ್ಕಾರವನ್ನು ಸಮರ್ಥಿಸಿಕೊಳ್ಳಲು ಕಾರ್ಯಕರ್ತರ ಪಡೆ ರಚಿಸಲಾಗುವುದು. ಸರ್ಕಾರದ ಸಮರ್ಥನೆಗೆ 15 ಲಕ್ಷ ಕಾರ್ಯಕರ್ತರಿಗೆ ತರಬೇತಿ ನೀಡಲಾಗುವುದು. ಸಂಸದರು, ಸಚಿವರು ಭೂಸ್ವಾಧೀನ ಮಸೂದೆ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು ಎಂದು ಕರೆ ನೀಡಿದರು.

ಪಕ್ಷದಲ್ಲಿ ಆಂತರಿಕ ಚುನಾವಣೆಯಾಗಬೇಕು. ಅದರಿಂದ ಆಂತರಿಕ ಪ್ರಜಾಪ್ರಭುತ್ವ ಉಳಿಯುತ್ತದೆ ಎಂದು ಅಭಿಪ್ರಾಯಪಟ್ಟರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited