Untitled Document
Sign Up | Login    
Dynamic website and Portals
  
April 6, 2015

ಸಂಪುಟ ವಿಸ್ತರಣೆಗೆ ಇನ್ನಷ್ಟು ಕಾಲಾವಕಾಶ: ಹೈಕಮಾಂಡ್ ಜತೆ ಸಿಎಂ ಚರ್ಚೆ

ಸಿಎಂ ಸಿದ್ದರಾಮಯ್ಯ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಗ್ರಾಮ ಪಂಚಾಯತ್‌ ಹಾಗೂ ಬಿಬಿಎಂಪಿ ಚುನಾವಣೆ ಹಿನ್ನೆಲೆಯಲ್ಲಿ ಸದ್ಯದ ಮಟ್ಟಿಗೆ ಸಚಿವ ಸಂಪುಟ ವಿಸ್ತರಣೆ ಮತ್ತು ಪುನಾರಚನೆ ಮಾಡುವುದು ಬೇಡ ಎಂಬ ಅಭಿಪ್ರಾಯ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೈಕಮಾಂಡ್‌ ಗೂ ಈ ವಿಚಾರ ಮನವರಿಕೆ ಮಾಡಿಕೊಟ್ಟು ಇನ್ನಷ್ಟು ಕಾಲಾವಕಾಶ ನೀಡುವಂತೆ ಮನವೊಲಿಸುವ ಸಾಧ್ಯತೆ ಇದೆ.

ದೆಹಲಿಯಲ್ಲಿ ನಡೆದ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಗಳು ಹಾಗೂ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಸಮಾವೇಶದಲ್ಲಿ ಪಾಲ್ಗೊಂಡ ಸಿದ್ದರಾಮಯ್ಯ, ರಾತ್ರಿ ದೆಹಲಿಯಲ್ಲೇ ಬೀಡುಬಿಟ್ಟಿದ್ದು, ಸೋಮವಾರ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಇತರ ಹಿರಿಯ ನಾಯಕರನ್ನು ಭೇಟಿ ಮಾಡಿ ಸಚಿವ ಸಂಪುಟ ವಿಸ್ತರಣೆ ಹಾಗೂ ಪುನಾರಚನೆ ಬಗ್ಗೆ ಚರ್ಚೆ ನಡೆಸಲಿದ್ದಾರೆ.

ಮೇ ನಲ್ಲಿ ಗ್ರಾಮ ಪಂಚಾಯತ್‌ ಚುನಾವಣೆ ನಿಗದಿಯಾಗಿರುವುದರಿಂದ ಮತ್ತು ಇನ್ನೊಂದೆಡೆ ನಿಗದಿತ ಸಮಯದಲ್ಲಿ ಬಿಬಿಎಂಪಿ ಚುನಾವಣೆ ನಡೆಸುವಂತೆ ಹೈಕೋರ್ಟ್‌ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಈಗ ಸಂಪುಟ ವಿಸ್ತರಣೆ ಮತ್ತು ಪುನಾರಚನೆಯ ದುಸ್ಸಾಹಸಕ್ಕೆ ಕೈಹಾಕುವುದು ಸರಿಯಲ್ಲ. ಹಾಗೊಂದು ವೇಳೆ ಆ ಕಾರ್ಯಕ್ಕೆ ಮುಂದಾದರೆ ಗ್ರಾಮ ಪಂಚಾಯತ್‌ ಚುನಾವಣೆ ಪ್ರಚಾರ ಕಾರ್ಯಕ್ರಮಗಳಿಗೆ ಸಮಸ್ಯೆಯಾಗಬಹುದು ಎಂಬ ವಿಚಾರವನ್ನು ಹೈಕಮಾಂಡ್‌ ನಾಯಕರಿಗೆ ಮುಖ್ಯಮಂತ್ರಿ ಮನವರಿಕೆ ಮಾಡಿ ಕೊಡಲಿದ್ದಾರೆ. ಈ ಚುನಾವಣೆಗಳ ಬಳಿಕವಷ್ಟೇ ಸಂಪುಟ ವಿಸ್ತರಣೆ ಹಾಗೂ ಪುನಾರಚನೆಗೆ ಅವಕಾಶ ಮಾಡಿಕೊಡುವಂತೆ ಸೋನಿಯಾ ಗಾಂಧಿ ಅವರ ಮನವೊಲಿಸುವ ಪ್ರಯತ್ನ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮುಂಬರುವ ಚುನಾವಣೆಗಳನ್ನು ಗಮನ ದಲ್ಲಿಟ್ಟುಕೊಂಡು ತಳಮಟ್ಟದಲ್ಲಿ ಪಕ್ಷ ಬಲವರ್ಧನೆ ಮಾಡಲು ಗ್ರಾಮ ಪಂಚಾಯತ್‌ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಬೇಕಿದೆ.

ಸಂಪುಟ ವಿಸ್ತರಣೆ ಹಾಗೂ ಪುನರ್‌ ರಚನೆ ಸದ್ಯಕ್ಕೆ ಬೇಡ ಎಂಬುದು ಮುಖ್ಯಮಂತ್ರಿಗಳ ಆಶಯವಾಗಿದ್ದರೂ ಹೈಕಮಾಂಡ್‌ ಮೇಲೆ ಆಕಾಂಕ್ಷಿಗಳಿಂದ ಭಾರೀ ಒತ್ತಡ ಇದೆ. ಹೀಗಾಗಿ ವರಿಷ್ಠರು ಸೋಮವಾರ ನಡೆಸುವ ಸಭೆಯಲ್ಲಿ ಸಿಎಂ ಇಚ್ಛೆಗೆ ಮಣೆ ಹಾಕುತ್ತಾರೋ ಇಲ್ಲ ಈಗಲೇ ಸಂಪುಟ ವಿಸ್ತರಣೆ ಹಾಗೂ ಪುನರ್‌ ರಚನೆಗೆ ಸೂಚಿಸುತ್ತಾರೋ ಎಂದು ಕಾದು ನೋಡಬೇಕಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited