Untitled Document
Sign Up | Login    
Dynamic website and Portals
  
April 6, 2015

ಡಿ.ಕೆ ರವಿ ಪ್ರಕರಣ: ಸರ್ಕಾರದ ಕಾಲಮಿತಿಯನ್ನು ತಿರಸ್ಕರಿಸಿದ ಸಿಬಿಐ

ಬೆಂಗಳೂರು : 'ಐ.ಎ.ಎಸ್' ಅಧಿಕಾರಿ ಡಿ.ಕೆ ರವಿ ಅವರ ನಿಗೂಢ ಸಾವಿನ ತನಿಖೆಯನ್ನು ಮೂರು ತಿಂಗಳಲ್ಲಿ ಮುಕ್ತಾಯಗೊಳಿಸಬೇಕೆಂಬ ಸರ್ಕಾರದ ಷರತ್ತಿಗೆ ಸಿಬಿಐ ವಿರೋಧ ವ್ಯಕ್ತಪಡಿಸಿದೆ.

ರಾಜ್ಯ ಸರ್ಕಾರದ ಅಧಿಸೂಚನೆಯನ್ನು ಸಿಬಿಐ ವಾಪಸ್ ಕಳಿಸಿದೆ. ರಾಜ್ಯಾದ್ಯಂತ ನಡೆದ ಪ್ರತಿಭಟನೆ, ಪ್ರತಿಪಕ್ಷಗಳ ಒತ್ತಡಕ್ಕೆ ಮಣಿದಿದ್ದ ರಾಜ್ಯ ಸರ್ಕಾರ ಮಾರ್ಚ್ 23ರಂದು ರವಿ ಸಾವಿನ ತನಿಖೆಯನ್ನು ಸಿಬಿಐಗೆ ಒಪ್ಪಿಸಿತ್ತು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತನಿಖೆಯನ್ನು ಮೂರು ತಿಂಗಳೊಳಗೆ ಪೂರ್ಣಗೊಳಿಸಿ ವರದಿ ನೀಡುವಂತೆ ಸಿಬಿಐ ಗೆ ಕಾಲಮಿತಿ ವಿಧಿಸಿದ್ದರು.

ರಾಜ್ಯ ಸರ್ಕಾರ ಹೊರಡಿಸಿರುವ ಅಧಿಸೂಚನೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ಸಿಬಿಐ, ಷರತ್ತು ರಹಿತ ಅಧಿಸೂಚನೆ ಹೊರಡಿಸಿದರೆ ಮಾತ್ರ ಡಿ.ಕೆ.ರವಿ ಸಾವಿನ ತನಿಖೆ ನಡೆಸುವುದಾಗಿ ಸಿಬಿಐ ರಾಜ್ಯ ಸರ್ಕಾರಕ್ಕೆ ಸ್ಪಷ್ಟಪಡಿಸಿದೆ.

ಸರ್ಕಾರ ಷರತ್ತು ವಿಧಿಸಿರುವುದರ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಜೆಡಿಎಸ್ ನಾಯಕ ಹೆಚ್.ಡಿ ಕುಮಾರಸ್ವಾಮಿ, ಡಿ.ಕೆ ರವಿ ಸಾವಿನ ಪ್ರಕರಣ ಸತ್ಯ ಹೊರಬರುವುದು ಸರ್ಕಾರಕ್ಕೆ ಇಷ್ಟವಿಲ್ಲ ಆದ್ದರಿಂದ ಷರತ್ತು ವಿಧಿಸಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಈ ಪ್ರಕರಣವನ್ನು ಸಿಬಿಐ ಹಲವು ಆಯಾಮಗಳಲ್ಲಿ ಆಳವಾಗಿ ತನಿಖೆ ನಡೆಸಬೇಕಾಗುತ್ತದೆ. ಹಾಗಾಗಿ ರಾಜ್ಯ ಸರ್ಕಾರ ಸಿಬಿಐಗೆ ಷರತ್ತು ವಿಧಿಸಿರುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited