ನವದೆಹಲಿ : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮತ್ತೆ ರಾಜ್ಯಾಧ್ಯಕ್ಷ ಸ್ಥಾನ ನೀಡಬೇಕೆಂದು ಹೇಳಿಕೆ ನೀಡಿದ್ದ ಬಿಜೆಪಿ ಮುಖಂಡ, ರಾಜ್ಯಸಭಾ ಸದಸ್ಯ ಪ್ರಭಾಕರ್ ಕೋರೆ ವಿರುದ್ಧ ಬಿಜೆಪಿ ಹೈಕಮಾಂಡ್ ಗರಂ ಆಗಿದೆ.
ಪ್ರಭಾಕರ್ ಕೋರೆಗೆ ನೋಟಿಸ್ ನೀಡುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ , ರಾಜ್ಯ ಬಿಜೆಪಿ ಉಸ್ತುವಾರಿ ಮುರಳೀಧರ್ ರಾವ್ ಅವರಿಗೆ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ರಾಷ್ಟ್ರೀಯ ಕಾರ್ಯಕಾರಿಣಿ ನಡೆಯುತ್ತಿದ್ದ ಸಂದರ್ಭದಲ್ಲಿ, ಕೋರೆಯವರು ಯಡಿಯೂರಪ್ಪಗೆ ಮತ್ತೆ ರಾಜ್ಯಾಧ್ಯಕ್ಷ ಸ್ಥಾನ ನೀಡುವ ಕುರಿತಂತೆ ಬಿಜೆಪಿ ವರಿಷ್ಠರ ಜೊತೆ ಮಾತುಕತೆ ನಡೆಸಲಾಗಿದೆ ಎಂದು ಹೇಳಿಕೆ ಕೊಟ್ಟಿದ್ದರು.
ಇದೀಗ ಪ್ರಭಾಕರ್ ಕೋರೆ ಹೇಳಿಕೆಗೆ ಅಸಮಾಧಾನ ವ್ಯಕ್ತಪಡಿಸಿರುವ ಅಮಿತ್ ಶಾ, ಇನ್ನುಮುಂದೆ ಪಕ್ಷದ ಯಾವ ನಾಯಕರು ಅನಗತ್ಯ ಹೇಳಿಕೆ ನೀಡಬಾರದು ಎಂದು ತಾಕೀತು ಮಾಡಿದ್ದಾರೆ ಎಂದು ತಿಳಿದುಬಂದಿದೆ.