Untitled Document
Sign Up | Login    
Dynamic website and Portals
  
April 8, 2015

ಮಸೀದಿಗಳಲ್ಲಿ ಮೈಕು ಬಳಕೆ ವಿರುದ್ಧ ಪಿಐಎಲ್: ಮಾಲಿನ್ಯ ನಿಯಂತ್ರಣ ಮಂಡಳಿಗೆ ಹೈಕೋರ್ಟ್ ತರಾಟೆ

ನಾಗರಿಕರ ಆರೋಗ್ಯ ಕಾಪಾಡುವುದೇ ನಮ್ಮ ಉದ್ದೇಶ - ಹೈಕೋರ್ಟ್

ಕರ್ನಾಟಕ ಹೈಕೋರ್ಟ್ (ಸಾಂದರ್ಭಿಕ ಚಿತ್ರ) ಕರ್ನಾಟಕ ಹೈಕೋರ್ಟ್ (ಸಾಂದರ್ಭಿಕ ಚಿತ್ರ)

ಬೆಂಗಳೂರು : 'ಶಬ್ದ ಮಾಲಿನ್ಯ'ಕ್ಕೆ ಸಂಬಂಧಿಸಿದಂತೆ ಮಾಲಿನ್ಯ ನಿಯಂತ್ರಣ ಮಂಡಳಿಯನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.

ಬೆಂಗಳೂರಿನಲ್ಲಿ ಉಂಟಾಗುತ್ತಿರುವ ಶಬ್ದ ಮಾಲಿನ್ಯದಿಂದ ಶೇ.90ರಷ್ಟು ನಾಗರಿಕರು ಕಿವುಡರಾಗುತ್ತಿದ್ದಾರೆ ಎಂದು ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಮಸೀದಿಯಲ್ಲಿ ಅಳವಡಿಸಲಾಗಿರುವ ಧ್ವನಿ ವರ್ಧಕದಿಂದ ಹೊರಬರುವ ಶಬ್ದದಿಂದ ತೊಂದರೆಯುಂಟಾಗುತ್ತಿದೆ ಎಂದು ಮಹಿಳೆಯೊಬ್ಬರು ಹೈಕೋರ್ಟ್ ಗೆ ಪಿಐಎಲ್ ಸಲ್ಲಿಸಿದ್ದರು. ಪಿಐಎಲ್ ವಿಚಾರಣೆ ನಡೆಸಿರುವ ಹೈಕೋರ್ಟ್ ನ ವಿಭಾಗೀಯ ಪೀಠ, ನಾವು ಯಾವುದೇ ಧರ್ಮದ ವಿರುದ್ಧವಾಗಿಲ್ಲ. ಆದರೆ ನಾಗರಿಕರ ಆರೋಗ್ಯ ಕಾಪಾಡುವುದೇ ನಮ್ಮ ಉದ್ದೇಶ ಎಂದು ಹೇಳಿದೆ.

ಇದೇ ವೇಳೆ ಶಬ್ದ ಮಾಲಿನ್ಯ ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳದೇ ಇರುವ ಬಗ್ಗೆ ಮಾಲಿನ್ಯ ನಿಯಂತ್ರಣ ಮಂಡಳಿಯನ್ನು ಪ್ರಶ್ನಿಸಿರುವ ಕೋರ್ಟ್, 5 ಡೆಸಿಬಲ್ ಗಿಂತ ಹೆಚ್ಚು ಶಬ್ದ ಹೊರಡಿಸುವಂತಿಲ್ಲ ಎಂಬ ಸುಪ್ರೀಂ ಕೋರ್ಟ್ ತೀರ್ಪನ್ನು ಮಾಲಿನ್ಯ ನಿಯಂತ್ರಣ ಮಂಡಳಿ ಉಲ್ಲಂಘಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದೆ. ಅಲ್ಲದೇ ಮಾಲಿನ್ಯ ತಡೆಗಟ್ಟದೆ ಶಾಂತಿಯುತ ಸಮಾವನ್ನು ಹುಚ್ಚರಾನ್ನಾಗಿಸುತ್ತಿದ್ದೀರಾ? ಎಂದು ಪ್ರಶ್ನಿಸಿದೆ.

ಬೆಂಗಳೂರಿನಲ್ಲಿ ಎಷ್ಟು ಮಾಲಿನ್ಯ ನಿಗಾ ಘಟಕಗಳು ಕಾರ್ಯನಿರ್ವಹಿಸುತ್ತಿದೆ ಹಾಗೂ ಮಾಲಿನ್ಯ ತಡೆಗಟ್ಟುವುದಕ್ಕೆ ಕೈಗೊಂಡಿರುವ ಕ್ರಮ ಏನು ಎಂಬುದರ ಬಗ್ಗೆ ಏ.13ರೊಳಗೆ ವರದಿ ನೀಡುವಂತೆ ಮಾಲಿನ್ಯ ನಿಯಂತ್ರಣ ಮಂಡಳಿಗೆ ಕೋರ್ಟ್ ಸೂಚನೆ ನೀಡಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited