Untitled Document
Sign Up | Login    
Dynamic website and Portals
  
April 9, 2015

ಕಾಶ್ಮೀರಿ ಪಂಡಿತರಿಗೆ ಪ್ರತ್ಯೇಕ ಟೌನ್ ಶಿಪ್ ನಿರ್ಮಾಣ ಅಸಾಧ್ಯ: ಜಮ್ಮು-ಕಾಶ್ಮೀರ ಸಿ.ಎಂ

ಜಮ್ಮು-ಕಾಶ್ಮೀರದ ಸಿ.ಎಂ ಮುಫ್ತಿ ಮೊಹಮದ್ ಸಯೀದ್ ಜಮ್ಮು-ಕಾಶ್ಮೀರದ ಸಿ.ಎಂ ಮುಫ್ತಿ ಮೊಹಮದ್ ಸಯೀದ್

ಜಮ್ಮು-ಕಾಶ್ಮೀರ : 'ಕಾಶ್ಮೀರಿ ಪಂಡಿತ'ರಿಗೆ ಪುನರ್ವಸತಿ ಕಲ್ಪಿಸುವ ಬಗ್ಗೆ ಪ್ರತ್ಯೇಕತಾವಾದಿಗಳ ವಿರೋಧ ವ್ಯಕ್ತವಾಗುತ್ತಿದ್ದಂತೆಯೇ ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಮುಫ್ತಿ ಮೊಹಮದ್ ಸಯೀದ್ ಉಲ್ಟಾ ಹೊಡೆದಿದ್ದಾರೆ.

ಪಂಡಿತರಿಗೆ ಪುನರ್ವಸತಿ ಕಲ್ಪಿಸುವ ಸಂಬಂಧ ಪ್ರತಿಕ್ರಿಯೆ ನೀಡಿರುವ ಮುಫ್ತಿ ಮೊಹಮದ್ ಸಯೀದ್, ಕಾಶ್ಮೀರಿ ಪಂಡಿತರಿಗೆ ಪ್ರತ್ಯೇಕ ಟೌನ್ ಶಿಪ್ ನಿರ್ಮಾಣ ಮಾಡುವುದನ್ನು ನಿರಾಕರಿಸಿದ್ದಾರೆ.

ಪಂಡಿತರಿಗೆ ಪ್ರತ್ಯೇಕ ಟೌನ್ ಶಿಪ್ ನಿರ್ಮಿಸುವ ಬಗ್ಗೆ ಏ.9ರಂದು ಜಮ್ಮು-ಕಾಶ್ಮೀರ ವಿಧಾನಸಭೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್(ಎನ್.ಸಿ) ಸದಸ್ಯರು ತೀವ್ರ ಗದ್ದಲ ಎಬ್ಬಿಸಿದರು. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ ಸಿ.ಎಂ ಮುಫ್ತಿ ಮೊಹಮದ್, ಕಾಶ್ಮೀರಿ ಪಂಡಿತರಿಗೆ ಪ್ರತ್ಯೇಕ ಟೌನ್ ಶಿಪ್ ನಿರ್ಮಿಸುವ ಉದ್ದೇಶ ಸರ್ಕಾರಕ್ಕೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಕಾಶ್ಮೀರಿ ಪಂಡಿತರು ತಮ್ಮ ಮಾತೃಸ್ಥಾನಕ್ಕೆ ವಾಪಸ್ ಬರಲು ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ತಿಳಿಸಿರುವ ಮುಫ್ತಿ ಮೊಹಮದ್, ವಾಪಸ್ಸಾಗಲಿರುವ ಪಂಡಿತರು ಮುಸ್ಲಿಮರೊಂದಿಗೆ ಸಹಬಾಳ್ವೆ ನಡೆಸಬೇಕೆಂದು ತಿಳಿಸಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited