Untitled Document
Sign Up | Login    
Dynamic website and Portals
  
April 9, 2015

ಪಂಡಿತರಿಗೆ ಪ್ರತ್ಯೇಕ ಟೌನ್ ಶಿಪ್ ನಿರ್ಮಾಣ ವಿಚಾರದಲ್ಲಿ ರಾಜಿ ಇಲ್ಲ: ರಾಜನಾಥ್ ಸಿಂಗ್

ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್

ನವದೆಹಲಿ : ಇಷ್ಟು ದಿನ ಎ.ಎಫ್.ಎಸ್.ಪಿ.ಎ ಹಾಗೂ ಆರ್ಟಿಕಲ್ 370 ಬಗ್ಗೆ ನಡೆಯುತ್ತಿದ್ದ ಬಿಜೆಪಿ-ಪಿಡಿಪಿ ನಡುವಿನ ಸಮರ ಇದೀಗ ಕಾಶ್ಮೀರಿ ಪಂಡಿತಪುನರ್ವಸತಿ ಬಗ್ಗೆ ಪ್ರಾರಂಭವಾಗಿದೆ.

ಕಾಶ್ಮೀರಿ ಪಂಡಿತರಿಗೆ ಪುನರ್ವಸತಿ ಕಲ್ಪಿಸುವುದರ ಬಗ್ಗೆ ಜಮ್ಮು-ಕಾಶ್ಮೀರ ಸಿ.ಎಂ ಮುಫ್ತಿ ಮೊಹಮದ್ ಸಯೀದ್ ನೀಡಿದ್ದ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿರುವ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಪಂಡಿತರಿಗೆ ಪ್ರತ್ಯೇಕ ಟೌನ್ ಶಿಪ್ ನಿರ್ಮಾಣ ಮಾಡುವ ವಿಚಾರದಿಂದ ದೂರ ಸರಿಯಲು ಸಾಧ್ಯವಿಲ್ಲ ಎಂದು ರಾಜನಾಥ್ ಸಿಂಗ್ ಸ್ಪಷ್ಟಪಡಿಸಿದ್ದಾರೆ.

ಪಂಡಿತರ ಪುನರ್ವಸತಿ ಬಗ್ಗೆ ಕೇಂದ್ರ ಸರ್ಕಾರ ಕೈಗೊಂಡಿದ್ದ ತೀರ್ಮಾನವೇ ಅಂತಿಮ, ಈ ಬಗ್ಗೆ ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಮುಫ್ತಿ ಮೊಹಮದ್ ಸಯೀದ್ ಅವರೊಂದಿಗೂ ಫಲಪ್ರದ ಮಾತುಕತೆ ನಡೆಸಿದ್ದಾಗಿ ರಾಜನಾಥ್ ಸಿಂಗ್ ಹೇಳಿದ್ದಾರೆ.

ಪಂಡಿತರಿಗೆ ಪುನರ್ವಸತಿ ಕಲ್ಪಿಸುವ ಸಂಬಂಧ ಜಮ್ಮು-ಕಾಶ್ಮೀರ ವಿಧಾನಸಭೆಯಲ್ಲಿ ಪ್ರತಿಕ್ರಿಯೆ ನೀಡಿದ್ದ ಮುಫ್ತಿ ಮೊಹಮದ್ ಸಯೀದ್, ಕಾಶ್ಮೀರಿ ಪಂಡಿತರಿಗೆ ಪ್ರತ್ಯೇಕ ಟೌನ್ ಶಿಪ್ ನಿರ್ಮಿಸುವ ಉದ್ದೇಶ ಸರ್ಕಾರಕ್ಕೆ ಇಲ್ಲ ಎಂದು ಹೇಳಿದ್ದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ರಾಜನಾಥ್ ಸಿಂಗ್, ಮುಫ್ತಿ ಮೊಹಮದ್ ಸಯೀದ್ ಹೇಳಿಕೆಗೆ ಆತಂಕ ಪಡುವ ಅಗತ್ಯವಿಲ್ಲ. ಕಾಶ್ಮೀರಿ ಪಂಡಿತಪುನರ್ವಸತಿ ಬಗ್ಗೆ ತಮ್ಮ ಸರ್ಕಾರಕ್ಕೆ ಕಾಳಜಿ ಇದೆ. ಎದುರಾಗಬಹುದಾದ ಅಡೆತಡೆಗಳನ್ನು ಗಮನದಲ್ಲಿಟ್ಟುಕೊಂಡೇ ಮಾರ್ಗಸೂಚಿಯನ್ನು ತಯಾರಿ ಮಾಡುತ್ತಿದ್ದೇವೆ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.

ಪಂಡಿತರಿಗೆ ಪ್ರತ್ಯೇಕ ಟೌನ್ ಶಿಪ್ ನಿರ್ಮಿಸುವ ಬಗ್ಗೆ ಏ.9ರಂದು ಜಮ್ಮು-ಕಾಶ್ಮೀರ ವಿಧಾನಸಭೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್(ಎನ್.ಸಿ) ಸದಸ್ಯರು ತೀವ್ರ ಗದ್ದಲ ಎಬ್ಬಿಸಿದರು. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ ಸಿ.ಎಂ ಮುಫ್ತಿ ಮೊಹಮದ್, ಕಾಶ್ಮೀರಿ ಪಂಡಿತರಿಗೆ ಪ್ರತ್ಯೇಕ ಟೌನ್ ಶಿಪ್ ನಿರ್ಮಿಸುವ ಉದ್ದೇಶ ಸರ್ಕಾರಕ್ಕೆ ಇಲ್ಲ ಎಂದಿದ್ದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited