Untitled Document
Sign Up | Login    
Dynamic website and Portals
  
April 12, 2015

ಮುಸ್ಲಿಂ ಮತ್ತು ಕ್ರಿಶ್ಚಿಯನ್ನರಿಗೆ ಸಂತಾನಹರಣ ಚಿಕಿತ್ಸೆ ಮಾಡಿ: ಸಾಧ್ವಿ ದೇವಾ

ನವದೆಹಲಿ : ದೇಶದಲ್ಲಿ ಹೆಚ್ಚುತ್ತಿರುವ ಮುಸ್ಲಿಂ ಮತ್ತು ಕ್ರಿಶ್ಚಿಯನ್ ಜನಸಂಖ್ಯೆಯನ್ನು ತಡೆಗಟ್ಟಬೇಕಾದರೆ ಸಂತಾನಹರಣ ಚಿಕಿತ್ಸೆಗೆ ಇವರನ್ನು ಒಳಪಡಿಸಬೇಕೆಂದು ಅಖಿಲ ಭಾರತ ಹಿಂದೂ ಮಹಾಸಭಾದ ಉಪಾಧ್ಯಕ್ಷೆ ಸಾಧ್ವಿ ದೇವಾಠಾಕೂರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ದಿನದಿಂದ ದಿನಕ್ಕೆ ಕ್ರಿಶ್ಚಿಯನ್ ಮತ್ತು ಮುಸ್ಲಿಂ ಜನಸಂಖ್ಯೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಇದನ್ನು ತಡೆಗಟ್ಟಬೇಕಾದರೆ ಈ ಸಮುದಾಯದವರನ್ನು ಬಲವಂತವಾಗಿಯಾದರೂ ಸರಿಯೇ ಸಂತಾನ ಹರಣ ಶಸ್ತ್ರ ಚಿಕಿತ್ಸೆಗೆ ಒಳಪಡಿಸಬೇಕಾದ ಅಗತ್ಯವಿದೆ ಎಂದು ಹೇಳಿದ್ದಾರೆ.

ಇಂದು ಹಿಂದೂ ಜನಸಂಖ್ಯೆ ಪ್ರಮಾಣ ಕಡಿಮೆಯಾಗುತ್ತಿದೆ. ಬದಲಿಗೆ ಮುಸ್ಲಿಂ ಮತ್ತು ಕ್ರಿಶ್ಚಿಯನ್ ಜನಸಂಖ್ಯೆ ಏರಿಕೆಯಾಗುತ್ತಲೇ ಇದೆ. ಕೇಂದ್ರ ಸರ್ಕಾರ ತುರ್ತಾಗಿ ಈ ಸಮುದಾಯದವರಿಗೆ ಸಂತಾನಹರಣ ಚಿಕಿತ್ಸೆ ನಡೆಸಲು ತುರ್ತುಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಇಲ್ಲವಾದಲ್ಲಿ ಇನ್ನು ಕೆಲವೇ ವರ್ಷಗಳಲ್ಲಿ ಹಿಂದೂಗಳೇ ದೇಶದಲ್ಲಿ ಅಲ್ಪಸಂಖ್ಯಾತರಾಗುವ ಸಾಧ್ಯತೆಯಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಹಿಂದೂ ಧರ್ಮ ಉಳಿಯಬೇಕಾದರೆ ಪ್ರತಿಯೊಬ್ಬ ಹೆಣ್ಣು ಮಗಳು ಹೆಚ್ಚು ಹೆಚ್ಚು ಮಕ್ಕಳನ್ನು ಹೆರಬೇಕು. ಇದರಿಂದ ಧರ್ಮ ಉಳಿಯಲು ಸಾಧ್ಯ ಎಂದು ಹೇಳಿದ್ದಾರೆ. ಮಸೀದಿ ಮತ್ತು ಚರ್ಚ್‌ಗಳಲ್ಲಿ ಹಿಂದೂ ದೇವರುಗಳನ್ನು ಪೂಜಿಸಬೇಕು. ಇದಕ್ಕೆ ಕೇಂದ್ರ ಸರ್ಕಾರ ನೂತನ ನಿಯಮವೊಂದನ್ನು ಜಾರಿ ಮಾಡಬೇಕೆಂದು ಹೇಳಿರುವ ಠಾಕೂರ್, ಹರಿಯಾಣದಲ್ಲಿ ನಾಥೂರಾಮ್ ಗೂಡ್ಸೆ ಪ್ರತಿಮೆ ನಿರ್ಮಾಣ ಮಾಡಲು ಮುಂದಾಗಿರುವ ಕ್ರಮಕ್ಕೆ ತಮ್ಮ ಸಂಪೂರ್ಣ ಬೆಂಬಲವಿದೆ ಎಂದು ಹೇಳಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited