ವಾಷಿಂಗ್ ಟನ್ : 2016ಕ್ಕೆ ಅಮೆರಿಕಾ ಅಧ್ಯಕ್ಷೀಯ ಚುನಾವಣೆ ನಡೆಯಲಿದೆ. ಅಮೆರಿಕದ ಮಾಜಿ ಕಾರ್ಯದರ್ಶಿ ಹಿಲರಿ ಕ್ಲಿಂಟನ್ ಅವರು ಈ ಬಾರಿಯ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸುತ್ತಿರುವುದು ಖಚಿತವಾಗಿದೆ.
ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಮಾಹಿತಿ ನೀಡಿರುವ ಹಿಲರಿ ಕ್ಲಿಂಟನ್, ಡೆಮಾಕ್ರೆಟಿಕ್ ಪಕ್ಷದ ಅಭ್ಯರ್ಥಿಯಾಗಿ ಆಯ್ಕೆಗೊಂಡಿರುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ತಿಳಿಸಿದ್ದಾರೆ.
2008ರಲ್ಲಿಯೂ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಿದ್ದ ಹಿಲರಿ ಕ್ಲಿಂಟನ್, ಬರಾಕ್ ಒಬಾಮಾ ವಿರುದ್ಧ ಸೋತಿದ್ದರು. ಇನ್ನು ಅಮೆರಿಕ ಅಧ್ಯಕ್ಷರಾಗಿ 2ನೇ ಅವಧಿಯನ್ನು ಪೂರೈಸಲಿರುವ ಬರಾಕ್ ಒಬಾಮ ಅವರು ಈ ಬಗ್ಗೆ ಪ್ರತಿಕ್ರಿಯಿಸಿದ್ದು ಹಿಲರಿ ಅತ್ಯುತ್ತಮ ಅಧ್ಯಕ್ಷರಾಗಲಿದ್ದಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ನ್ಯೂಯಾರ್ಕ್ ನ ಬ್ರೂಕ್ಲಿನ್ ನಲ್ಲಿ ಚುನಾವಣಾ ಪ್ರಚಾರದ ಮುಖ್ಯ ಕಚೇರಿ ಸ್ಥಾಪಿಸಲು ಹಿಲರಿ ಕ್ಲಿಂಟನ್ ಈಗಾಗಲೇ ಎಲ್ಲ ಸಿದ್ಧತೆ ಮಾಡಿಕೊಂಡಿದ್ದಾರೆ. ಹಿಲರಿ ಕ್ಲಿಂಟನ್ ಅವರು ಅಮೆರಿಕದ ವಿದೇಶಾಂಗ ಕಾರ್ಯದರ್ಶಿಯಾಗಿಯೂ ಕಾರ್ಯನಿರ್ವಹಿಸಿದ್ದಾರೆ.