ಲಖ್ನೌ : ಜನಪ್ರತಿನಿಧಿಗಳ ವಿರುದ್ಧ ಭ್ರಷ್ಟಾಚಾರ ನಡೆಸುತ್ತಿರುವ ಆರೋಪ ಮಾಡಿದ್ದ ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ ಸಿಂಗ್ ಯಾದವ್ ಗೆ ಬಿಜೆಪಿ ಸವಾಲು ಹಾಕಿದ್ದು ಸಮಾಜವಾದಿ ಪಕ್ಷದಲ್ಲಿರುವ ಭ್ರಷ್ಟರ ವಿರುದ್ಧ ಕ್ರಮ ಕೈಗೊಳ್ಳಲಿ ಎಂದು ಹೇಳಿದೆ.
ಜನಸಾಮಾನ್ಯರನ್ನು ನಿರ್ಲಕ್ಷಿಸುತ್ತಿರುವ ಜನಪ್ರತಿನಿಧಿಗಳು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ಮುಲಾಯಂ ಸಿಂಗ್ ಯಾದವ್ ಹೇಳಿಕೆ ನೀಡಿದ್ದರು ಈ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಭ್ರಷ್ಟಾಚಾರದ ಬಗ್ಗೆ ಹೇಳಿಕೆ ನೀಡುವ ಬದಲು ತಮ್ಮ ಪಕ್ಷದಲ್ಲೇ ಇರುವ ಭ್ರಷ್ಟರ ವಿರುದ್ಧ ಮುಲಾಯಂ ಸಿಂಗ್ ಯಾದವ್ ಕ್ರಮ ಕೈಗೊಳ್ಳಲಿ ಎಂದು ಸಲಹೆ ನೀಡಿದೆ.
ತಮ್ಮ ಪಕ್ಷದ ಸಂಸದ, ಸಚಿವರ ವಿರುದ್ಧವೇ ಈ ಹಿಂದೆ ಮುಲಾಯಂ ಸಿಂಗ್ ಯಾದವ್ ಅವರು ಆರೋಪ ಮಾಡಿದ್ದರು, ಕೇವಲ ಭಾಷಣ ಮಾಡದೇ ಅಂತಹವರ ವಿರುದ್ಧವೂ ಕ್ರಮ ಕೈಗೊಳ್ಳಲಿ ಎಂದು ಉತ್ತರ ಪ್ರದೇಶ ಬಿಜೆಪಿ, ವಕ್ತಾರ ವಿಜಯ್ ಬಹದ್ದೂರ್ ಹೇಳಿದ್ದಾರೆ.
ಜನಪ್ರತಿನಿಧಿಗಳು ಸರಿಯಾಗಿ ಕೆಲಸ ಮಾಡಿದರೆ ನಮ್ಮ ದೇಶದ ಹಳ್ಳಿಗಳ ಚಿತ್ರಣ ಬದಲಾಗಲಿದೆ ಆದರೆ ಅವರು ಕೆಲಸ ಮಾಡುವ ಬದಲು ಭ್ರಷ್ಟಾಚರದಲ್ಲಿ ತೊಡಗಿದ್ದಾರೆ ಎಂದು ಮುಲಾಯಂ ಸಿಂಗ್ ಯಾದವ್ ಹೇಳಿದ್ದರು.