ನವದೆಹಲಿ : 'ಭೂಸ್ವಾಧೀನ ಕಾಯ್ದೆ'ಯನ್ನು ವಿರೋಧಿಸುತ್ತಿರುವ ವಿರೋಧಪಕ್ಷಗಳಿಗೆ ತಕ್ಕ ಪ್ರತ್ಯುತ್ತರ ನೀಡಲು ಬಿಜೆಪಿ ಕೂಡ ಕಿಸಾನ್ ರ್ಯಾಲಿ ಹಮ್ಮಿಕೊಂಡಿದೆ.
ಭೂಸ್ವಾಧೀನ ಕಾಯ್ದೆಯನ್ನು ವಿರೋಧಿಸಿ ಏ.19ರಂದು ಕಾಂಗ್ರೆಸ್ ಕಿಸಾನ್ ರ್ಯಾಲಿ ಹಮ್ಮಿಕೊಂಡಿದೆ. ಇದಕ್ಕೆ ಪರ್ಯಾಯವಾಗಿ ಕಿಸಾನ್ ರ್ಯಾಲಿ ಹಮ್ಮಿಕೊಂಡಿರುವ ಬಿಜೆಪಿ, ಎನ್.ಡಿ.ಎ ಸರ್ಕಾರ ಜಾರಿಗೆ ತಂದಿರುವ ಭೂಸ್ವಾಧೀನ ಕಾಯ್ದೆ ರೈತವಿರೋಧಿಯಲ್ಲ ಎಂಬುದನ್ನು ಮನವರಿಕೆ ಮಾಡಲು ಮುಂದಾಗಿದೆ.
ಬಿಜೆಪಿಯ ಕಿಸಾನ್ ರ್ಯಾಲಿಯಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ, ಬಿಜೆಪಿ ಸಂಸದರು ಭಾಗವಹಿಸಲಿದ್ದಾರೆ. ರ್ಯಾಲಿ ಬಗ್ಗೆ ಮಾತನಾಡಿರುವ ದೆಹಲಿ ಬಿಜೆಪಿ ಅಧ್ಯಕ್ಷ ಸತೀಶ್ ಉಪಾಧ್ಯಾಯ, ಭೂಸ್ವಾಧೀನ ಕಾಯ್ದೆ ಬಗ್ಗೆ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು, ಕಾಯ್ದೆಯನ್ನು ರೈತವಿರೋಧಿ ಎಂದು ದಾರಿತಪ್ಪಿಸುತ್ತಿವೆ ಎಂದು ಆರೋಪಿಸಿದ್ದಾರೆ.
ಭೂಸ್ವಾಧೀನ ಕಾಯ್ದೆ ರೈತವಿರೋಧಿ ಅಲ್ಲ ಎಂಬುದನ್ನು ಮನವರಿಕೆ ಮಾಡಲು ಬಿಜೆಪಿ ಕಿಸಾನ್ ರ್ಯಾಲಿ ಹಮ್ಮಿಕೊಂಡಿದೆ ಎಂದು ಸತೀಶ್ ಉಪಾಧ್ಯಾಯ ತಿಳಿಸಿದ್ದಾರೆ.