Untitled Document
Sign Up | Login    
Dynamic website and Portals
  
April 15, 2015

ಬೋಸರಿಗೆ ಸಂಬಂಧಿಸಿದ ರಹಸ್ಯ ದಾಖಲೆ ಬಹಿರಂಗಪಡಿಸುವ ಬಗ್ಗೆ ನಿರ್ಧರಿಸಲು ಸಮಿತಿ ರಚನೆ

ಸುಭಾಷ್ ಚಂದ್ರ ಬೋಸ್ ಸುಭಾಷ್ ಚಂದ್ರ ಬೋಸ್

ನವದೆಹಲಿ : ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ನಿಗೂಢ ಕಣ್ಮರೆಗೆ ಸಂಬಂಧಿಸಿದಂತೆ ರಹಸ್ಯ ದಾಖಲೆಗಳನ್ನು ಬಹಿರಂಗಪಡಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲು ಕೇಂದ್ರ ಸರ್ಕಾರ ಉನ್ನತ ಮಟ್ಟದ ಸಮಿತಿಯನ್ನು ರಚಿಸಿದೆ.

ಸಂಪುಟ ಕಾರ್ಯದರ್ಶಿ ನೇತೃತ್ವದಲ್ಲಿ ರಚನೆಯಾಗಿರುವ ಸಮಿತಿ ಸುಭಾಷ್ ಚಂದ್ರ ಬೋಸರ ನಿಗೂಢ ಕಣ್ಮರೆಗೆ ಸಂಬಂಧಿಸಿದಂತೆ ದಾಖಲೆಗಳನ್ನು ಬಿಡುಗಡೆ ಮಾಡಬೇಕೋ ಬೇಡವೋ ಎಂಬ ಬಗ್ಗೆ ನಿರ್ಧಾರ ಕೈಗೊಳ್ಳಲಿದೆ. ಸಮಿತಿಯಲ್ಲಿ ರಾ ಅಧಿಕಾರಿಗಳು, ಗುಪ್ತಚರ ಇಲಾಖೆ ಅಧಿಕಾರಿಗಳು ಹಾಗೂ ಪ್ರಧಾನಮಂತ್ರಿ ಕಾರ್ಯಾಲಯ ಅಧಿಕಾರಿಗಳು ಸಹ ಇರಲಿದ್ದಾರೆ.

ಉನ್ನತ ಮೂಲಗಳ ಮಾಹಿತಿ ಪ್ರಕಾರ ಭಾರತ ಹಾಗೂ ಕೆಲ ವಿದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧಗಳ ಮೇಲೆ ಪ್ರತಿಕೂಲ ಪರಿಣಾಮ ಬೀರಬಲ್ಲಂತಹ ದಾಖಲೆಗಳನ್ನು ಬಿಡುಗಡೆ ಮಾಡದೇ ಇರಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಹೇಳಲಾಗಿದೆ.

ಸುಭಾಷ್ ಚಂದ್ರ ಬೋಸ್ ಅವರ ನಿಗೂಢ ಕಣ್ಮರೆಗೆ ಸಂಬಂಧಿಸಿದಂತೆ ರಹಸ್ಯ ದಾಖಲೆಗಳನ್ನು ಬಹಿರಂಗಪಡಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲು ಸಮಿತಿ ರಚನೆ ಮಾಡಿರುವುದನ್ನು ಸುಭಾಷ್ ಚಂದ್ರ ಬೋಸ್ ಅವರ ಸೋದರ ಸಂಬಂಧಿ ಸೂರ್ಯ ಕುಮಾರ್ ಬೋಸ್ ಅವರು ಸ್ವಾಗತಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಬೆನ್ನಲ್ಲೇ ಕೇಂದ್ರ ಸರ್ಕಾರ ಈ ನಿರ್ಧಾರ ಕೈಗೊಂಡಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಪ್ರಧಾನಿ ಮೋದಿ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited