Untitled Document
Sign Up | Login    
Dynamic website and Portals
  
April 16, 2015

ದೀರ್ಘಕಾಲದ ರಜೆ ಬಳಿಕ ಭಾರತಕ್ಕೆ ವಾಪಸ್ಸಾದ ರಾಹುಲ್ ಗಾಂಧಿ

ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ

ನವದೆಹಲಿ : 56 ದಿನಗಳ ಸುದೀರ್ಘ ರಜೆಯ ಬಳಿಕ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಗುರುವಾರ ಭಾರತಕ್ಕೆ ವಾಪಸ್ ಆಗಿದ್ದಾರೆ. ಈ ಮೂಲಕ ಹಲವು ದಿನಗಳಿಂದ ಎದ್ದಿದ್ದ ಊಹಾಪೋಹಗಳಿಗೆ ತೆರೆ ಬಿದ್ದಂತಾಗಿದೆ.

ಬೆಳಗ್ಗೆ ಥಾಯ್ ಏರ್ ವೇಸ್ ಮೂಲಕ ದೆಹಲಿಯ ವಿಮಾನ ನಿಲ್ದಾಣಕ್ಕೆ ರಾಹುಲ್ ಗಾಂಧಿ ಬಂದಿಳಿದಿದ್ದು, ತಮ್ಮ ನಿವಾಸದತ್ತ ಹೊರಟಿದ್ದಾರೆ ಎಂದು ರಾಹುಲ್ ಕಚೇರಿ ಮೂಲಗಳು ಖಚಿತಪಡಿಸಿವೆ.

ರಾಹುಲ್ ಆಗಮನದ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಪ್ರಿಯಾಂಕಾ ವಾದ್ರಾ, ರಾಬರ್ಟ್ ವಾದ್ರಾ ರಾಹುಲ್ ನಿವಾಸಕ್ಕೆ ತೆರಳಿದ್ದಾರೆ.

ಆದರೆ ರಾಹುಲ್ ಗಾಂಧಿ ಇಷ್ಟುದಿನ ಯಾವ ದೇಶದಲ್ಲಿದ್ದರು? ಯಾವ ಕಾರಣಕ್ಕಾಗಿ ದೀರ್ಘ ರಜೆ ಪಡೆದಿದ್ದರು, ರಾಹುಲ್ ರಜೆ ಬಗ್ಗೆ ಕಾಂಗ್ರೆಸ್ ಗುಟ್ಟು ಮಾಡಿದ್ದೇಕೆ ಎಂಬ ಪ್ರಶ್ನೆಗೆ ಇನ್ನಷ್ಟೇ ಉತ್ತರ ದೊರೆಯಬೇಕಾಗಿದೆ. ಮೂಲಗಳ ಪ್ರಕಾರ ರಾಹುಲ್ ವಿಯೆಟ್ನಾಂನಿಂದ ಭಾರತಕ್ಕೆ ವಾಪಸ್ ಆಗಿದ್ದಾರೆ ಎನ್ನಲಾಗಿದೆ.

ಕಾಂಗ್ರೆಸ್ ಯುವರಾಜ ರಾಹುಲ್ ಗಾಂಧಿ ಅವರು ಫೆ.22ರಿಂದ ರಜೆ ತೆಗೆದುಕೊಂಡಿದ್ದು, ಮಹತ್ವದ ಬಜೆಟ್ ಅಧಿವೇಶನಕ್ಕೆ ಗೈರು ಹಾಜರಾಗಿದ್ದರು. ಈ ಮಧ್ಯೆಯೇ ಅವರಿಗೆ ಕಾಂಗ್ರೆಸ್ ಅಧ್ಯಕ್ಷ ಹುದ್ದೆಯನ್ನು ನೀಡುವ ಬಗ್ಗೆಯೂ ಮಾತುಗಳು ಕೇಳಿ ಬಂದಿದ್ದವು. ಆದರೆ ರಾಹುಲ್ ಅವರ ಗೈರು ಹಾಜರಿ ಪಕ್ಷದ ಹಿರಿಯ ನಾಯಕರಲ್ಲೇ ಅಸಮಾಧಾನಕ್ಕೆ ಕಾರಣವಾಗಿತ್ತು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited