Untitled Document
Sign Up | Login    
Dynamic website and Portals
  
April 16, 2015

ಪ್ರತ್ಯೇಕತಾವಾದಿಗಳ ಬಗ್ಗೆ ಮೃದು ಧೋರಣೆ, ಸಿ.ಎಂ ವಿರುದ್ಧ ಬೀದಿಗಿಳಿದ ಕಾಶ್ಮೀರದ ಜನತೆ

ಜಮ್ಮು-ಕಾಶ್ಮೀರದ ಸಿ.ಎಂ ಮುಫ್ತಿ ಮೊಹಮದ್ ಸಯೀದ್ ಜಮ್ಮು-ಕಾಶ್ಮೀರದ ಸಿ.ಎಂ ಮುಫ್ತಿ ಮೊಹಮದ್ ಸಯೀದ್

ಜಮ್ಮು-ಕಾಶ್ಮೀರ : 'ಕಾಶ್ಮೀರ' ಪ್ರತ್ಯೇಕತಾವಾದಿಗಳ ಬಗ್ಗೆ ಮೃದು ಧೋರಣೆ ಅನುಸರಿಸುತ್ತಿರುವುದನ್ನು ವಿರೋಧಿಸಿರುವ ಜಮ್ಮು-ಕಾಶ್ಮೀರದ ಜನತೆ ಮುಖ್ಯಮಂತ್ರಿ ಮುಫ್ತಿ ಮೊಹಮದ್ ಸಯೀದ್ ವಿರುದ್ಧ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.

ಕಾಶ್ಮೀರದಲ್ಲಿ ಪಾಕಿಸ್ತಾನದ ಧ್ವಜ ಹಾರಿಸಿದ್ದ ಪ್ರತ್ಯೇಕತಾವಾದಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಸಿ.ಎಂ ಗೆ ಸೂಚನೆ ನೀಡಿದ್ದರು. ಇದರ ಹೊರತಾಗಿಯೂ ಯಾವುದೇ ಕ್ರಮ ಕೈಗೊಳ್ಳದೇ ಇರುವುದಕ್ಕೆ ಆಕ್ರೋಶಗೊಂಡಿರುವ ರಾಜ್ಯದ ಜನತೆ, ಸಿ.ಎಂ ಮುಫ್ತಿ ಮೊಹಮದ್ ಸಯೀದ್ ವಿರುದ್ಧ ತಿರುಗಿ ಬಿದ್ದಿದ್ದಾರೆ.

ರಾಜ್ಯದಲ್ಲಿ ಹೆಚ್ಚುತ್ತಿರುವ ಪ್ರತ್ಯೆಕತಾವಾದದ ಬಗ್ಗೆ ಜಮ್ಮು-ಕಾಶ್ಮೀರದ ನಾಗರಿಕರು ಆತಂಕ ವ್ಯಕ್ತಪಡಿಸಿದ್ದಾರೆ. ಬಿಜೆಪಿ-ಪಿಡಿಪಿ ಸಮ್ಮಿಶ್ರ ಸರ್ಕಾರ ರಚನೆಯಾದಾಗಿನಿಂದಲೂ ಮುಖ್ಯಮಂತ್ರಿ ಮುಫ್ತಿ ಮೊಹಮದ್ ಸಯೀದ್, ಪ್ರತ್ಯೇಕತಾವಾದಿಯಂತೆಯೇ ಮಾತನಾಡುತ್ತಿದ್ದಾರೆ, ಪ್ರತ್ಯೇಕತಾವಾದಿಗಳ ಅಜೆಂಡಾವನ್ನೇ ಮುಂದುವರೆಸುತ್ತಿದ್ದಾರೆ ಎಂದು ಪ್ರತಿಭಟನಾ ನಿರತರೊಬ್ಬರು ಆರೋಪಿಸಿದ್ದಾರೆ.

ಇದೇ ವೇಳೆ ಪ್ರತ್ಯೇಕತಾವಾದಿಗಳಿಗೆ ನೀಡಲಾಗಿರುವ ಭದ್ರತೆ, ಸೌಲಭ್ಯಗಳನ್ನು ಕೂಡಲೇ ರದ್ದುಗೊಳಿಸಿ, ಅವರನ್ನು ಬಂಧಿಸಬೇಕು ಎಂದು ಪ್ರತಿಭಟನಾ ನಿರತರು ಒತ್ತಾಯಿಸಿದ್ದಾರೆ. ಕಾಶ್ಮೀರ ಭಾರತದ ಅವಿಭಾಜ್ಯ ಅಂಗ ಎಂದು ರಾಜ್ಯದ ಬಹುತೇಕ ಜನರು ಘೋಷಿಸಿದ್ದಾರೆ.

ಏ.15ರಂದು ಪ್ರತ್ಯೇಕತಾವಾದಿ ನಾಯಕ ಮಸರತ್ ಆಲಂ ಮತ್ತು ಯಾಸೀನ್ ಮಲಿಕ್ ಕಾಶ್ಮೀರದಲ್ಲಿ ನಡೆಸಿದ ರ್ಯಾಲಿಯಲ್ಲಿ ಪಾಕಿಸ್ತಾನದ ಧ್ವಜವನ್ನು ಹಾರಿಸಿದ್ದರು. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಮುಫ್ತಿ ಮೊಹಮದ್ ಸಯೀದ್ ಗೆ ಸೂಚನೆ ನೀಡಿದ್ದರು. ಆದರೆ ಸಿ.ಎಂ ಮಾತ್ರ ಈ ವರೆಗೂ ಕ್ರಮ ಕೈಗೊಳ್ಳುವುದರ ಬಗ್ಗೆ ಯಾವುದೆ ಪ್ರತಿಕ್ರಿಯೆ ನೀಡಿಲ್ಲ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Protest

ಕೆ ಎಸ್ ಒಯು ಮುಚ್ಚದಂತೆ ಎಬಿವಿಪಿ ಪ್ರತಿಭಟನೆ: ಲಘು ಲಾಠಿ ಪ್ರಹಾರ
  • ಕೆ ಎಸ್ ಒಯು ಮುಚ್ಚದಂತೆ ಎಬಿವಿಪಿ ಪ್ರತಿಭಟನೆ: ಲಘು ಲಾಠಿ ಪ್ರಹಾರ
  • ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವನ್ನು ಮುಚ್ಚಲು ಮುಂದಾಗಿರುವ ಸರ್ಕಾರದ ಕ್ರಮ ಖಂಡಿಸಿ ಎಬಿವಿಪಿ ಬೃಹತ್ ಪ್ರತಿಭಟನೆ ಅರಂಭಿಸಿದ್ದು, ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.
  • ದೇಶವ್ಯಾಪಿ ಪೆಟ್ರೋಲ್ ಬಂಕ್ ಮುಷ್ಕರ ವಾಪಸ್
  • ಸಿಪಿಎಂ ಕಛೇರಿಗೆ ಮುತ್ತಿಗೆ: ಬಿ ಎಸ್ ಯಡಿಯೂರಪ್ಪ ಸೇರಿದಂತೆ ಹಲವರ ಬಂಧನ
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited