ಬೆಂಗಳೂರು : ಕಾನೂನು ಚೌಕಟ್ಟಿನಲ್ಲಿ ಮೇಕೆದಾಟಿನಲ್ಲಿ ಅಣೆಕಟ್ಟು ಕಟ್ಟು ನಿರ್ಮಾಣ ಮಾಡುತ್ತೇವೆ ಎಂದು ನೀರಾವರಿ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇಕೆದಾಟು ಅಣೆಕಟ್ಟು ಸ್ಥಾಪನೆ ಸಂಬಂಧ ಇದೇ 22ರಂದು ನವದೆಹಲಿಯಲ್ಲಿ ಸರ್ವಪಕ್ಷಗಳ ನಿಯೋಗಗಳನ್ನು ಕೊಂಡೊಯ್ದು ಪ್ರಧಾನಮಂತ್ರಿ ನರೇಂದ್ರಮೋದಿಯವರನ್ನು ಭೇಟಿಯಾಗಿ ಅಣೆಕಟ್ಟು ಅವಶ್ಯಕತೆ ಬಗ್ಗೆ ಮನವರಿಕೆ ಮಾಡಿಕೊಡಲಾಗುವುದು ಎಂದು ಹೇಳಿದರು.
ಮೇಕೆದಾಟಿನಲ್ಲಿ ಅಣೆಕಟ್ಟು ನಿರ್ಮಿಸುವುದರಿಂದ ತಮಿಳುನಾಡಿಗೆ ಯಾವುದೇ ತೊಂದರೆ ಉಂಟಾಗುವುದಿಲ್ಲ. ಆದರೂ ಆ ರಾಜ್ಯದವರು ತಗಾದೆ ತೆಗೆದಿರುವುದು ಸರಿಯಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಇದೇ ಸಂದರ್ಭದಲ್ಲಿ ಮೇಕೆದಾಟು ಯೋಜನೆ ಸಂಬಂಧ ಬಂದ್ ನಡೆಸುತ್ತಿರುವ ಕನ್ನಡಿಗರು ಶಾಂತಿ ಕಾಪಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.