Untitled Document
Sign Up | Login    
Dynamic website and Portals
  
April 19, 2015

ಭೂಸ್ವಾಧೀನ ವಿರೋಧಿಸಿ ಕಾಂಗ್ರೆಸ್ ನಿಂದ ಬೃಹತ್ ಕಿಸಾನ್ ರ್ಯಾಲಿ

ನವದೆಹಲಿ : ಭೂಸ್ವಾಧೀನ ಕಾಯ್ದೆಗೆ ಕೇಂದ್ರ ಸರ್ಕಾರ ತಿದ್ದುಪಡಿ ತರುತ್ತಿರುವುದನ್ನು ವಿರೋಧಿಸಿ ಕಾಂಗ್ರೆಸ್‌ ಪಕ್ಷ ದೆಹಲಿಯ ಐತಿಹಾಸಿಕ ರಾಮಲೀಲಾ ಮೈದಾನದಲ್ಲಿ ಬೃಹತ್‌ ಕಿಸಾನ್‌ ರ್ಯಾಲಿ ಆಯೋಜಿಸಿದೆ.

ಬೆಳಗ್ಗೆ 11.30ರಿಂದ ಮಧ್ಯಾಹ್ನ 1.30ರವರೆಗೆ ರ್ಯಾಲಿ ನಡೆಯಲಿದ್ದು, ಈ ಸಮಾವೇಶದಲ್ಲಿ ಕರ್ನಾಟಕ ಸೇರಿದಂತೆ ದೇಶದ ವಿವಿಧ ಭಾಗಗಳಿಂದ ರೈತರು ಪಾಲ್ಗೊಳ್ಳಲಿದ್ದಾರೆ. ಈಗಾಗಲೇ ಹಲವು ರಾಜ್ಯಗಳಿಂದ ರೈತರನ್ನು ಕರೆತರಲು ದೆಹಲಿಗೆ ವಿಶೇಷ ರೈಲು ವ್ಯವಸ್ಥೆ ಮಾಡಲಾಗಿದೆ.

ರ್ಯಾಲಿಯಲ್ಲಿ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ, ಉಪಾಧ್ಯಕ್ಷ ರಾಹುಲ್‌ ಗಾಂಧಿ ಅವರು ಕೇಂದ್ರ ಸರ್ಕಾರದ ವಿರುದ್ಧ ವಾಗ್ಧಾಳಿ ನಡೆಸುವ ನಿರೀಕ್ಷೆ ಇದೆ. ರಾಹುಲ್‌ ಗಾಂಧಿ ಅವರು ತಮ್ಮ 56 ದಿನಗಳ ನಿಗೂಢ ರಜೆಯ ನಂತರ ಪಾಲ್ಗೊಳ್ಳಲಿರುವ ಮೊದಲ ಬಹಿರಂಗ ಸಮಾವೇಶ ಇದಾಗಿದ್ದು, ಅವರು ಏನು ಮಾತನಾಡಲಿದ್ದಾರೆ ಎಂಬುದು ಕುತೂಹಲ ಕೆರಳಿಸಿದೆ.

ಸೋಮವಾರದಿಂದ ಲೋಕಸಭೆ ಅಧಿವೇಶನ ಪ್ರಾರಂಭವಾಗಲಿದ್ದು, ಆ ಕಲಾಪದಲ್ಲೂ ರಾಹುಲ್‌ ಅವರು ಭೂಸ್ವಾಧೀನ ವಿಚಾರವನ್ನು ಪ್ರಸ್ತಾಪಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಆದರೆ, ಕಿಸಾನ್‌ ರ್ಯಾಲಿಯು ರಾಹುಲ್‌ ಶಕ್ತಿ ಸಾಮರ್ಥ್ಯದ ಅಳತೆಗೋಲಲ್ಲ ಎಂದು ಪಕ್ಷದ ಮುಖಂಡ ದಿಗ್ವಿಜಯ ಸಿಂಗ್‌ ಸ್ಪಷ್ಟಪಡಿಸಿದ್ದಾರೆ.

ಕಿಸಾನ್‌ ರ್ಯಾಲಿಯಲ್ಲಿ ಕಾರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್‌ ಭಾಗವಹಿಸಲಿದ್ದಾರೆ. ರ್ಯಾಲಿಯಲ್ಲಿ ಭಾಗವಹಿಸಿ ಸಂಜೆ ಮತ್ತೆ ಬೆಂಗಳೂರಿಗೆ ವಾಪಸಾಗಲಿದ್ದಾರೆ.

ಶಾಸಕ ಕೆ.ಎನ್‌.ರಾಜಣ್ಣ, ಮಾಜಿ ಸಂಸದ ಎಚ್‌.ವಿಶ್ವನಾಥ್‌ ಸೇರಿದಂತೆ ಸುಮಾರು 2 ಸಾವಿರ ಜನ ಕಾರ್ಯಕರ್ತರು ರ್ಯಾಲಿಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited