Untitled Document
Sign Up | Login    
Dynamic website and Portals
  
April 20, 2015

ಗದ್ದಲದ ನಡುವೆಯೇ ಬಿಬಿಎಂಪಿ ವಿಭಜನೆ ವಿಧೇಯಕ ಮಂಡನೆ

ಬೆಂಗಳೂರು : ವಿಪಕ್ಷಗಳ ತೀವ್ರ ವಿರೋಧ, ಗದ್ದಲದ ನಡುವೆಯೂ ಬಿಬಿಎಂಪಿ ವಿಭಜನೆ ತಿದ್ದುಪಡಿ ವಿಧೇಯಕವನ್ನು ವಿಧಾನಸಭೆಯಲ್ಲಿ ನಡೆದ ಏಕದಿನ ವಿಶೇಷ ಅಧಿವೇಶನದಲ್ಲಿ ಮಂಡಿಸಲಾಗಿದೆ.

ವಿಧಾನಮಂಡಲದಲ್ಲಿ ವಿಶೇಷ ಅಧಿವೇಶನದ ಕಲಾಪ ಆರಂಭವಾಗುತ್ತಿದ್ದಂತೆ ವಿಧಾನಸಭೆ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಉತ್ತರ ಕರ್ನಾಟಕದ ಬೆಳೆ ಹಾನಿ ಬಗ್ಗೆ ಚರ್ಚೆಗೆ ಅವಕಾಶ ನೀಡಬೇಕೆಂದು ಪಟ್ಟು ಹಿಡಿದರು. ಈ ಚರ್ಚೆಗೆ ಮಧ್ಯಾಹ್ನದ ನಂತರ ಅವಕಾಶ ಕೊಡುವುದಾಗಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಸೂಚಿಸಿದರು.

ಆದರೆ ಈ ಸಂದರ್ಭದಲ್ಲಿ ಬಿಜೆಪಿ, ಜೆಡಿಎಸ್ ಸದಸ್ಯರು ತೀವ್ರ ಗದ್ದಲ ಎಬ್ಬಿಸಿದರು. ಗಲಾಟೆ, ಕೋಲಾಹಲದ ನಡುವೆಯೇ ಕಾನೂನು ಸಚಿವ ಟಿ.ಬಿ.ಜಯಚಂದ್ರ, ಬಿಬಿಎಂಪಿ ವಿಭಜನೆಯ ಕರ್ನಾಟಕ ನಗರಪಾಲಿಕೆಗಳ (ತಿದ್ದುಪಡಿ) ವಿಧೇಯಕ, 2015 ಅನ್ನು ಮಂಡಿಸಿದರು.

ವಿಧೇಯಕ ಮಂಡನೆಯಾದಾಗ ಪ್ರತಿಪಕ್ಷ ಸದಸ್ಯರು ತೀವ್ರ ವಾಗ್ದಾಳಿ ನಡೆಸಿದರು. ಆಗ ಸಿದ್ದರಾಮಯ್ಯ ಮತ್ತು ಜಗದೀಶ್ ಶೆಟ್ಟರ್ ನಡುವೆ ವಾಕ್ಸಮರ ನಡೆಯಿತು. ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಕೂಡಾ ಸರ್ಕಾರದ ವಿರುದ್ಧ ಕಿಡಿಕಾರಿದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited