Untitled Document
Sign Up | Login    
Dynamic website and Portals
  
April 22, 2015

ಆಮ್ ಆದ್ಮಿ ಪ್ರತಿಭಟನಾ ರ್ಯಾಲಿಯಲ್ಲಿ ರೈತನ ಸಾವು

ನವದೆಹಲಿ : 'ಕೇಂದ್ರ ಸರ್ಕಾರ' ಜಾರಿಗೆ ತಂದಿರುವ ಭೂಸ್ವಾಧೀನ ಕಾಯ್ದೆಯನ್ನು ವಿರೋಧಿಸಿ ಆಮ್ ಆದ್ಮಿ ಪಕ್ಷ ನಡೆಸುತ್ತಿರುವ ಧರಣಿಯಲ್ಲಿ ಭಾಗವಹಿಸಿದ್ದ ರೈತನೋರ್ವ ಮೃತಪಟ್ಟಿದ್ದಾನೆ.

ದೆಹಲಿಯಲ್ಲಿ ಸಿ.ಎಂ ಅರವಿಂದ್ ಕೇಜ್ರಿವಾಲ್ ನೇತೃತ್ವದಲ್ಲಿ ಆಮ್ ಆದ್ಮಿ ಪಕ್ಷ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದೆ. ಈ ಪ್ರತಿಭಟನೆಯಲ್ಲಿ ನೂರಾರು ರೈತರು ಭಾಗವಹಿಸಿದ್ದಾರೆ. ರ್ಯಾಲಿ ವೇಳೆ ರೈತನೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದ, ಕೂಡಲೇ ಆತನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ.

ಮೃತ ರೈತನನ್ನು ರಾಜಸ್ಥಾನ್ ಮೂಲದ ಗಜೇಂದ್ರ ಸಿಂಗ್ ಎಂದು ಗುರುತಿಸಲಾಗಿದೆ. ಆಪ್ ರ್ಯಾಲಿ ವೇಳೆ ಈತ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ. ಕೂಡಲೇ ಸಿಂಗ್ ಅವರನ್ನು ಆರ್ ಎಂಎಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾನೆ.

ಆರ್.ಎಂ.ಎಲ್ ಆಸ್ಪತ್ರೆಗೆ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಭೇಟಿ ನೀಡಿದ್ದು ಮೃತ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ರಾಹುಲ್ ಗಾಂಧಿ, ರೈತರು ಗಾಬರಿಯಾಗಬೇಕಿಲ್ಲ. ನಾವು ಸದಾ ರೈತರೊಂದಿಗಿರುತ್ತೇವೆ, ಕೈಲಾದಷ್ಟು ಸಹಾಯ ಮಾಡುತ್ತೇವೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited