Untitled Document
Sign Up | Login    
Dynamic website and Portals
  
April 24, 2015

ರ್ಯಾಲಿಯಲ್ಲಿ ರೈತನ ಆತ್ಮಹತ್ಯೆ ಪ್ರಕರಣ: ಕ್ಷಮೆ ಯಾಚಿಸಿದ ಕೇಜ್ರಿವಾಲ್

ಅರವಿಂದ್ ಕೇಜ್ರಿವಾಲ್ (ಸಾಂದರ್ಭಿಕ ಚಿತ್ರ) ಅರವಿಂದ್ ಕೇಜ್ರಿವಾಲ್ (ಸಾಂದರ್ಭಿಕ ಚಿತ್ರ)

ನವದೆಹಲಿ : ತಮ್ಮ ಪಕ್ಷ ಹಮ್ಮಿಕೊಂಡಿದ್ದ ರ್ಯಾಲಿಯಲ್ಲಿ ರೈತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರಕರಣದ ಬಗ್ಗೆ ಅರವಿಂದ್ ಕೇಜ್ರಿವಾಲ್ ಪ್ರತಿಕ್ರಿಯೆ ನೀಡಿದ್ದು, ಘಟನೆ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಕ್ಷಮೆಯನ್ನೂ ಕೋರಿದ್ದಾರೆ.

ರೈತ ನೇಣು ಬಿಗಿದುಕೊಂಡಿದ್ದರೂ ಅರವಿಂದ್ ಕೇಜ್ರಿವಾಲ್ ತಮ್ಮ ಭಾಷಣವನ್ನೇ ಮುಂದುವರೆಸುತ್ತಿದ್ದರು ಎಂಬ ಗಂಭೀರ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿರುವ ಅರವಿಂದ್ ಕೇಜ್ರಿವಾಲ್, ಘಟನೆ ನಡೆದ ಸ್ಥಳ ಹಾಗೂ ನಾನು ವೇದಿಕೆಯಲ್ಲಿದ್ದ ಸ್ಥಳಕ್ಕೂ ಅಂತರವಿತ್ತು. ಹೀಗಾಗಿ ಏನು ನಡೆದಿದೆ ಎಂಬುದು ನನಗೆ ಗೊತ್ತಿಲ್ಲ. ಆದರೂ ನನ್ನಿಂದ ತಪ್ಪಾಗಿದೆ. ಆದ್ದರಿಂದ ಕ್ಷಮೆ ಕೇಳುತ್ತೇನೆ ಎಂದು ಹೇಳಿದ್ದಾರೆ.

ರೈತಆತ್ಮಹತ್ಯೆ ಪ್ರಕರಣದಲ್ಲಿ ತನ್ನ ತಪ್ಪೂ ಇರುವುದರಿಂದ ನಾನು ಬೇರೊಬ್ಬರ ಮೇಲೆಯೂ ಗೂಬೆ ಕೂರಿಸುವ ಪ್ರಯತ್ನ ಮಾಡುವುದಿಲ್ಲ ಎಂದು ಕೇಜ್ರಿವಾಲ್ ತಿಳಿಸಿದ್ದಾರೆ. ಘಟನಾ ಸ್ಥಳದಲ್ಲಿ ಎಎಪಿಯ ಸಾಕಷ್ಟು ಕಾರ್ಯಕರ್ತರು ಜಮಾಯಿಸಿದ್ದರು. ಆದರೆ ಯಾರೊಬ್ಬರಿಗೂ ಆತ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾನೆ ಎಂಬುದು ಮಾತ್ರ ತಿಳಿದಿರಲಿಲ್ಲ ಎಂದಿದ್ದಾರೆ.

ಭೂಸ್ವಾಧೀನ ಕಾಯ್ದೆಯನ್ನು ವಿರೋಧಿಸಿ ಏ.22ರಂದು ನವದೆಹಲಿಯಲ್ಲಿ ಆಮ್ ಆದ್ಮಿ ಪಕ್ಷ ಪ್ರತಿಭಟನೆ ನಡೆಸುತ್ತಿದ್ದ ವೇಳೆ ರಾಜಸ್ಥಾನದ ಗಜೇಂದ್ರ ಸಿಂಗ್ ಎಂಬ ರೈತ ಮರಕ್ಕೆ ನೇಣು ಹಾಕಿಕೊಂಡಿದ್ದ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited