Untitled Document
Sign Up | Login    
Dynamic website and Portals
  
April 24, 2015

ಭೂಸ್ವಾಧೀನ ಕಾಯ್ದೆಗೆ ಬೆಂಬಲವಿಲ್ಲ: ಮಮತಾ ಬ್ಯಾನರ್ಜಿ ಪುನರುಚ್ಚಾರ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ಕೋಲ್ಕತ್ತಾ : ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಭೂಸ್ವಾಧೀನ ಕಾಯ್ದೆ ಬಗ್ಗೆ ಪ್ರತಿಕ್ರಿಯಿಸಿರುವ ತೃಣಮೂಲ ಕಾಂಗ್ರೆಸ್ ನಾಯಕಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಕಾಯ್ದೆಗೆ ಬೆಂಬಲ ನೀಡುವುದಿಲ್ಲ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.

ಭೂಸ್ವಾಧೀನ ಕಾಯ್ದೆ ಸಂಬಂಧ ನಮ್ಮ ನಿಲುವನ್ನು ಸಂಸತ್ ನಲ್ಲಿಯೇ ಸ್ಪಷ್ಟಪಡಿಸಿದ್ದೇವೆ, ಒತ್ತಾಯ ಪೂರ್ವಕವಾಗಿ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳುವುದಕ್ಕೆ ನಮ್ಮ ಪಕ್ಷದ ವಿರೋಧವಿದೆ. ಆದ್ದರಿಂದಲೇ ನಾನು 26 ದಿನಗಳವರೆಗೆ ಉಪವಾಸ ಸತ್ಯಾಗ್ರಹ ನಡೆಸಿದ್ದೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಯಾರಾದರೂ ತಮ್ಮ ಭೂಮಿಯನ್ನು ಸರ್ಕಾರಕ್ಕೆ ನೀಡಲು ಮುಂದಾದರೆ, ಮಾತುಕತೆ ಮೂಲಕ ಭೂಮಿಯನ್ನು ವಶಪಡಿಸಿಕೊಳ್ಳಬೇಕು, ಒತ್ತಾಯಪೂರ್ವಕವಾಗಿ ಯಾರಿಂದಲೂ ಭೂಮಿಯನ್ನು ವಶಕ್ಕೆ ಪಡೆಯಬಾರದು ಎಂದು ಬ್ಯಾನರ್ಜಿ ತಿಳಿಸಿದ್ದಾರೆ.

ಇದೇ ವೇಳೆ ನವದೆಹಲಿಯಲ್ಲಿ ನಡೆದ ಆಮ್ ಆದ್ಮಿ ಪಕ್ಷದ ರ್ಯಾಲಿಯಲ್ಲಿ ರೈತನೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ ಮಮತಾ ಬ್ಯಾನರ್ಜಿ, ರೈತನ ಆತ್ಮಹತ್ಯೆ ದುರದೃಷ್ಟಕರ ಎಂದು ತಿಳಿಸಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited